ಮುರುಘಾ ಶ್ರೀ ಗಳ ನ್ಯಾಯಾಂಗ ಬಂಧನದ ಅವಧಿ 14 ದಿನಗಳ ಕಾಲ ವಿಸ್ತರಣೆ : ನ್ಯಾಯಾಲಯ ಆದೇಶ

ಚಿತ್ರದುರ್ಗ, ಸೆ.27 : ಪೋಕ್ಸೋ ಪ್ರಕರಣದ ಅಡಿಯಲ್ಲಿ ಬಂಧಿತರಾಗಿರುವ ಚಿತ್ರದುರ್ಗದ ಬೃಹನ್ಮಠದ ಮುರುಘಾ ಶ್ರೀ ಗಳ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಣೆ ಮಾಡಿ ನ್ಯಾಯಾಲಯ ಆದೇಶ ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿ ಜೈಲುಪಾಲಾಗಿದ್ದ ಮುರುಘಾ ಶ್ರೀಗಳ ನ್ಯಾಯಾಂಗ ಬಂಧನದ ಅವಧಿ ಇಂದಿಗೆ ಅಂತ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಶ್ರೀಗಳನ್ನು ಇಂದು ಚಿತ್ರದುರ್ಗದ ಎರಡನೇ ಸತ್ರ ನ್ಯಾಯಾಲಯಕ್ಕೆ ಮತ್ತೆ ಹಾಜರುಪಡಿಸಲಾಗಿತ್ತು. ಈ ವೇಳೆ ಮುರುಘಾ ಶ್ರೀ ಗಳ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು, ಆರೋಪಿಗೆ ಮತ್ತೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಇದರೊಂದಿಗೆ ಶ್ರೀಗಳ ಜೈಲುವಾಸ ಅ.10 ರವರೆಗೆ ಮುಂದುವರಿದಿದೆಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!