ಸಮಾಜದಲ್ಲಿ ಅಶಾಂತಿ ಸೃಷ್ಟಿಸುತ್ತಿರುವ ಆರೆಸ್ಸೆಸ್ ವಿರುದ್ಧವೂ ಕ್ರಮ ಕೈಗೊಳ್ಳಿ: ಸಿದ್ದರಾಮಯ್ಯ
ಬೆಂಗಳೂರು ಸೆ.28 : ಸಮಾಜದಲ್ಲಿ ಅಶಾಂತಿ ಸೃಷ್ಟಿಸುತ್ತಿರುವ ಆರೆಸ್ಸೆಸ್ ವಿರುದ್ಧವೂ ಕ್ರಮ ಕೈಗೊಳ್ಳಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಮುಂದಿನ ಐದು ವರ್ಷಗಳ ಅವಧಿಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು ನಿಷೇಧಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಸಮಾಜದಲ್ಲಿ ಶಾಂತಿ ಹಾಳು ಮಾಡುವ ಯಾವುದೇ ಸಂಘಟನೆಯನ್ನ
ನಿಷೇಧ ಮಾಡಬೇಕು. ಇದನ್ನೇ ಈ ಹಿಂದೆಯೂ ಹೇಳಿದ್ದೆ. ಈಗಲೂ ಅದನ್ನೇ ಹೇಳುತ್ತಿದ್ದೇನೆ'.
ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಯಾವುದೇ ಸಂಘಟನೆ ವಿರುದ್ಧ ಕ್ರಮ ಕೈಗೊಂಡರೆ ನಮ್ಮದೇನು ವಿರೋಧ ಇಲ್ಲ. ಅದೇ ರೀತಿ ಆರೆಸ್ಸೆಸ್ ಸಂಘಟನೆ ಕೂಡ ಸಮಾಜದಲ್ಲಿ ಅಶಾಂತಿ ಸೃಷ್ಟಿಸುತ್ತಿದ್ದು, ಆ ಸಂಘಟನೆ ವಿರುದ್ಧವೂ ಕ್ರಮ ಕೈಗೊಳ್ಳಬೇಕು’ ಎಂದು ಅವರು ಆಗ್ರಹಿಸಿದರು.
Useless Siddu