ಬೈಂದೂರು: ಬಸ್ ಡಿಕ್ಕಿ ಹೊಡೆದು ವ್ಯಕ್ತಿ ಮೃತ್ಯು

ಬೈಂದೂರು ಅ.1 (ಉಡುಪಿ ಟೈಮ್ಸ್ ವರದಿ) : ರಸ್ತೆ ಬದಿಯಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ವ್ಯಕ್ತಿಯೊಬ್ಬರಿಗೆ ಬಸ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ವ್ಯಕ್ತಿ ಮೃತಪಟ್ಟ ಘಟನೆ ಕಿರಿಮಂಜೇಶ್ವರ ಗ್ರಾಮದ ಅರೆಹೊಳೆ ಜಂಕ್ಷನ್ ಬಳಿ ನಡೆದಿದೆ.

ಮೃತರನ್ನು ಆನಂದ ಶೆಟ್ಟಿ (70) ಎಂದು ಗುರುತಿಸಲಾಗಿದೆ. ನಿನ್ನೆ ಬೆಳಿಗ್ಗೆ ಆನಂದ ಶೆಟ್ಟಿ ಅವರು ಕಿರಿಮಂಜೇಶ್ವರ ಗ್ರಾಮದ ಅರೆಹೊಳೆ ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿಯ ರಸ್ತೆ ಬದಿಯಲ್ಲಿ ಬಸ್ ಗಾಗಿ ಕಾದು ನಿಂತು ಕೊಂಡಿದ್ದರು. ಈ ವೇಳೆ ಬೈಂದೂರು ಕಡೆಯಿಂದ ಕುಂದಾಪುರ ಕಡೆಗೆ ವೇಗವಾಗಿ ಬಂದ ಬಸ್ ಆನಂದ ಶೆಟ್ಟಿ ಅವರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಆನಂದ ಶೆಟ್ಟಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರು ಚಿಕಿತ್ಸೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಈ ಬಗ್ಗೆ ಹೇರೂರು ಗ್ರಾಮದ ಮಂಜುನಾಥ ನಾಯ್ಕ ಎಂಬವರು ನೀಡಿದ ದೂರಿನಂತೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

Leave a Reply

Your email address will not be published. Required fields are marked *

error: Content is protected !!