ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಮೋಹಕ ತಾರೆ ರಮ್ಯಾ

ಬೆಂಗಳೂರು ಅ.6: ಹಲವು ಸಮಯದಿಂದ ಚಿತ್ರರಂಗದಿಂದ ದೂರ ಉಳಿದಿರುವ ನಟಿ ರಮ್ಯಾ ಅವರು ಮತ್ತೆ ತೆರೆ ಮೇಲೆ ಕಾಣಿಸಿಕೊಳ್ಳಬೇಕು ಎಂಬ ಅವರ ಅಭಿಮಾನಿಗಳ ಬಯಕೆ ಈಡೇರುವ ಸಮಯ ಸನೀಹದಲ್ಲಿದೆ.

ಇತ್ತೀಚೆಗೆ ನಟಿ ರಮ್ಯಾ ಅವರು ತಾವು ನಿರ್ಮಾಣದ ಮೂಲಕ ಚಿತ್ರರಂಗದಲ್ಲಿ ಮತ್ತೆ ಸಕ್ರಿಯರಾಗುವ ಬಗ್ಗೆ ಅಭಿಮಾನಿಸಗಳಿಗೆ ಸಿಹಿ ಸುದ್ದಿ ನೀಡಿದ್ದರು. ಇದೀಗ ಮತ್ತೊಂದು ಖುಷಿಯ ವಿಚಾರವನ್ನು ಹಂಚಿಕೊಂಡಿರುವ ನಟಿ ರಮ್ಯಾ ಅವರು ಮತ್ತೆ ತೆರೆಯ ಮೇಲೆ ಅಭಿಮಾನಿಗಳನ್ನು ರಂಜಿಸಲು ಬರುತ್ತಿರುವುದಾಗಿ ಹೇಳಿಕೊಂಡಿದ್ದಾರೆ.

ಸದ್ಯ ಕನ್ನಡ ಚಿತ್ರರಂಗಕ್ಕೆ ಮತ್ತೆ ಬರುತ್ತಿರುವ ರಮ್ಯಾ ಅವರು ಈ ಬಾರಿ ಕರಾವಳಿಯ ಜನಪ್ರಿಯ ನಟ, ನಿರ್ದೇಶಕ ರಾಜ್ ಬಿ ಶೆಟ್ಟಿ ಅವರ ಜೊತೆಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಈ ಚಿತ್ರದ ಶೀರ್ಷಿಕೆ ಅನೌನ್ಸ್  ಆಗಿದ್ದು, ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಎಂದು ಟೈಟಲ್ ಇಡಲಾಗಿದೆ. ರಮ್ಯಾ ಅವರು ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾಗೆ ಕೇವಲ ನಿರ್ಮಾಪಕಿ ಮಾತ್ರ ಅಲ್ಲ. ಈ ಚಿತ್ರದಲ್ಲಿ ಅವರು ಮುಖ್ಯ ಪಾತ್ರ ಕೂಡ ನಿರ್ವಹಿಸಲಿದ್ದಾರೆ ಎಂಬ ವಿಷಯ ಕೇಳಿ ಅವರ ಅಭಿಮಾನಿಗಳು ಭಾರೀ ಖುಷಿಯಾಗಿದ್ದಾರೆ.

ರಮ್ಯಾ ಒಡೆತನದ ‘ಆಪಲ್ ಬಾಕ್ಸ್ ಸ್ಟುಡಿಯೋಸ್’ ಮೂಲಕ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರ ನಿರ್ಮಾಣ ಆಗಲಿದ್ದು, ಈ ಚಿತ್ರ ನಿಮಾರ್ಣಕ್ಕೆ ‘ಲೈಟರ್ ಬುದ್ಧ ಫಿಲ್ಮ್ಸ್’ ಸಂಸ್ಥೆ ಕೂಡ ಕೈ ಜೋಡಿಸುತ್ತಿದೆ. ಸದ್ಯಕ್ಕೆ ಚಿತ್ರದ ಪ್ರೀ-ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು, ಶೀಘ್ರದಲ್ಲೇ ಶೂಟಿಂಗ್ ಆರಂಭ ಆಗಲಿದೆ. ‘ಗರುಡ ಗಮನ ವೃಷಭ ವಾಹನ’ ಚಿತ್ರದಲ್ಲಿ ಕೆಲಸ ಮಾಡಿದ ಹಲವು ತಂತ್ರಜ್ಞರು ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದಲ್ಲೂ ಮುಂದುವರಿಯಲಿದ್ದಾರೆ. ವಿಧುನ್ ಮುಕುಂದನ್ ಸಂಗೀತ ನಿರ್ದೇಶನ ಮಾಡಿದ್ದು, ಪ್ರವೀಣ್ ಶ್ರಿಯಾನ್ ಛಾಯಾಗ್ರಹಣ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!