ಡಾ. ಕಾತ್ಯಾಯಿನಿ ಕುಂಜಿಬೆಟ್ಟುರವರಿಗೆ ಕನಕ ಯುವ ಪುರಸ್ಕಾರ ಗೌರವ

ಉಡುಪಿ(ಉಡುಪಿ ಟೈಮ್ಸ್ ವರದಿ): ಕರ್ನಾಟಕ ಸರಕಾರ, ರಾಷ್ಟ್ರೀಯ ಸಂತ ಕವಿ ಕನಕದಾಸ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರದ ವತಿಯಿಂದ ಕೊಡಮಾಡುವ ಕನಕ ಯುವ ಪುರಸ್ಕಾರಕ್ಕೆ ಉಡುಪಿಯ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಭಾಜನರಾಗಿದ್ದಾರೆ.

ಕನ್ನಡ ಮತ್ತು ಸಂಸ್ಕತಿ ಇಲಾಖೆಯ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ಕನಕ ಜಯಂತಿ ಆಚರಣೆಯ ಸಮಾರಂಭದಲ್ಲಿ ೨೦೧೯-೨೦ ನೇ ಸಾಲಿನ ಕನಕ ಯುವ ಪುರಸ್ಕಾರ ನೀಡಿ ಡಾ. ಕಾತ್ಯಾಯಿನಿ ಅವರನ್ನು ಗೌರವಿಸಲಾಯಿತು.

ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಪ್ರಶಸ್ತಿ ಪ್ರದಾನ ಮಾಡಿ, ಕಾತ್ಯಾಯಿನಿ ಅವರನ್ನು ಅಭಿನಂದಿಸಿದರು. ಈ ಸಂದರ್ಭ ಸಮಾರಂಭದಲ್ಲಿ ಜಗದ್ಗುರು ಸಿದ್ದರಾಮಾನಂದ ಸ್ವಾಮೀಜಿ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವ ಬೈರತಿ ಬಸವರಾಜ್ ಹಾಗೂ ಸಚಿವರು, ಮಾಜಿ ಸಚಿವರು – ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ರಶ್ಮಿ, ನಿರ್ದೇಶಕ ಎಸ್ ರಂಗಪ್ಪ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!