ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ: ಹಳದಿ ಅಲರ್ಟ್ ಘೋಷಣೆ

ಬೆಂಗಳೂರು ಅ.19 : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಅ. 20ರಿಂದ 22 ರವರೆಗೆ ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು ಹಳದಿ ಅಲರ್ಟ್ ಘೋಷಿಸಲಾಗಿದೆ.

ಅ.20 ರಿಂದ 22 ರವರೆಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಇಂದು ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಕರ್ನಾಟಕದ ಉತ್ತರ ಒಳನಾಡಿನಲ್ಲಿ ಹಾಗೂ ಕರಾವಳಿ ಭಾಗದಲ್ಲೂ ಅಧಿಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಹಳದಿ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಸೇರಿದಂತೆ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಸೂಚನೆ ನೀಡಿದೆ.

Leave a Reply

Your email address will not be published. Required fields are marked *

error: Content is protected !!