ನ.1ರಂದು ನಟ ಪುನೀತ್ ರಾಜ್ಕುಮಾರ್ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ : ಸಿಎಂ ಬೊಮ್ಮಾಯಿ
ಬೆಂಗಳೂರು ಅ.20 : ಕನ್ನಡದ ಖ್ಯಾತ ನಟ ದಿವಂಗತ ಪುನೀತ್ ರಾಜ್ ಕುಮಾರ್ ಅವರಿಗೆ ನ.1 ರಂದು ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ಈ ಬಗ್ಗೆ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ಅವರು, ನಟ ಪುನಿತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಕೊಡಲು ತೀರ್ಮಾನಿಸಿದ್ದು, ನವೆಂಬರ್ 1 ರಂದು ವಿಧಾನಸೌಧದಲ್ಲಿ ಪ್ರಶಸ್ತಿ ಪ್ರದಾನ ಮಾಡಲಿದ್ದೇವೆ ಎಂದು ಹೇಳಿದರು.
ಹಾಗೂ “ಎಲ್ಲರ ಮನದಾಳದಲ್ಲಿ ಚಿರಸ್ಥಾಯಿಯಾಗಿ ಉಳಿದಿರುವ ಪುನೀತ್ ನಿಜವಾಗಿಯೂ ಕರ್ನಾಟಕ ರತ್ನ. ಅವರು ಯುವಜನತೆಗೆ ಸದಾ ಪ್ರೇರಣೆ ನೀಡುತ್ತಿದ್ದರು. ಪುನೀತ್ ಹೆಸರು ಚಿರಸ್ಥಾಯಿಯಾಗಬೇಕು, ಪ್ರೇರಣೆಯಾಗಬೇಕು ಎಂದು ಈ ಪುರಸ್ಕಾರ ನೀಡಲಾಗುತ್ತಿದೆ” ಎಂದು ತಿಳಿಸಿದರು.