ನ.1ರಂದು ನಟ ಪುನೀತ್ ರಾಜ್​ಕುಮಾರ್​ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ : ಸಿಎಂ ಬೊಮ್ಮಾಯಿ

ಬೆಂಗಳೂರು  ಅ.20 : ಕನ್ನಡದ ಖ್ಯಾತ ನಟ ದಿವಂಗತ ಪುನೀತ್ ರಾಜ್​ ಕುಮಾರ್ ಅವರಿಗೆ ನ.1 ರಂದು ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಈ ಬಗ್ಗೆ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ಅವರು, ನಟ ಪುನಿತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಕೊಡಲು ತೀರ್ಮಾನಿಸಿದ್ದು, ನವೆಂಬರ್ 1 ರಂದು ವಿಧಾನಸೌಧದಲ್ಲಿ ಪ್ರಶಸ್ತಿ ಪ್ರದಾನ ಮಾಡಲಿದ್ದೇವೆ ಎಂದು ಹೇಳಿದರು.

ಹಾಗೂ “ಎಲ್ಲರ ಮನದಾಳದಲ್ಲಿ ಚಿರಸ್ಥಾಯಿಯಾಗಿ ಉಳಿದಿರುವ ಪುನೀತ್ ನಿಜವಾಗಿಯೂ ಕರ್ನಾಟಕ ರತ್ನ. ಅವರು ಯುವಜನತೆಗೆ ಸದಾ ಪ್ರೇರಣೆ ನೀಡುತ್ತಿದ್ದರು. ಪುನೀತ್ ಹೆಸರು ಚಿರಸ್ಥಾಯಿಯಾಗಬೇಕು, ಪ್ರೇರಣೆಯಾಗಬೇಕು ಎಂದು ಈ ಪುರಸ್ಕಾರ ನೀಡಲಾಗುತ್ತಿದೆ” ಎಂದು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!