ಭೀಕರ ರಸ್ತೆ ಅಪಘಾತದಲ್ಲಿ 15 ಮಂದಿ ಸಾವು

ರೇವಾ ಅ.22 : ಮಧ್ಯಪ್ರದೇಶದ ರೇವಾ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಹಾಗೂ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 15 ಮಂದಿ ಮೃತಪಟ್ಟಿದ್ದು, 35 ಮಂದಿ ಗಾಯಗೊಂಡಿದ್ದಾರೆ.

ಹೈದರಾಬಾದ್ ನಿಂದ ಗೋರಖಪುರಕ್ಕೆ ತೆರಳುತ್ತಿದ್ದ ಬಸ್ ಹಾಗೂ ಲಾರಿ ನಡುವೆ ನಿನ್ನೆ ರಾತ್ರಿ 11.30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 15 ಮಂದಿ ಮೃತಪಟ್ಟಿದ್ದು ಗಾಯಗೊಂಡ ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಥಿಯೋಂಥರ್ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಸೊಹಗಿ ಪೊಲೀಸ್ ಠಾಣೆಯ ಅಧಿಕಾರಿಗಳು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಬಸ್ಸಿನಲ್ಲಿದ್ದವರು ದೀಪಾವಳಿ ಆಚರಣೆಯಲ್ಲಿ ಪಾಲ್ಗೊಳ್ಳಲು ಈ ಪ್ರಯಾಣಿಕರು ತಮ್ಮ ಊರುಗಳಿಗೆ ತೆರಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮೃತರ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Leave a Reply

Your email address will not be published. Required fields are marked *

error: Content is protected !!