ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ್ಯು

ಉತ್ತರ ಪ್ರದೇಶ, ಅ.24 : ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯ ಮುಂಡೇರ್ವಾ ಪ್ರದೇಶದಲ್ಲಿ ನಡೆದಿದೆ.

ಸಂತ ಕಬೀರ್ ನಗರಕ್ಕೆ ಹೋಗುತ್ತಿದ್ದ ಕಾರು ರಸ್ತೆ ಬದಿ ನಿಂತಿದ್ದ ಕಂಟೈನರ್ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ರಭಸಕ್ಕೆ ಕಾರು ಟ್ರಕ್ ನಲ್ಲಿ ಸಿಲುಕಿಕೊಂಡಿದ್ದು, ಎಲ್ಲಾ ಮೃತ ದೇಹಗಳನ್ನು ಶವಾಗಾರಕ್ಕೆ ಕಳುಹಿಸಲಾಗಿದೆ ಎಂದು ಬಸ್ತಿ ಪೊಲೀಸ್ ವರಿಷ್ಠಾಧಿಕಾರಿ ಆಶಿಶ್ ಶ್ರೀವಾಸ್ತವ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!