ಕುಂದಾಪುರ : 13 ವರ್ಷದ ಬಾಲಕಿ ಹೃದಯಾಘಾತದಿಂದ ಮೃತ್ಯು
ಕುಂದಾಪುರ, ಅ.28 : ತಾಲೂಕಿನ ತಲ್ಲೂರಿನಲ್ಲಿ 13 ವರ್ಷದ ಬಾಲಕಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.
ಕುಂದಾಪುರದಲ್ಲಿ ಅಕ್ಷರ ದಾಸೋಹ ಯೋಜನೆಯ ಉಪನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ ಹಾಗೂ ಹಕ್ಲಾಡಿ ಪ್ರೌಢಶಾಲೆಯ ಶಿಕ್ಷಕಿ ಭಾರತಿ ದಂಪತಿಯ ಪುತ್ರಿ ಅನುಶ್ರೀ ಮೃತಪಟ್ಟ ಬಾಲಕಿ.
ಅನುಶ್ರೀ ಹಟ್ಟಿಯಂಗಡಿಯ ಶ್ರೀ ಸಿದ್ದಿವಿನಾಯಕ ವಸತಿ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ನಿನ್ನೆ ಮನೆಯಲ್ಲಿ ಓದುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಪ್ರಜ್ಞೆ ಕಳೆದುಕೊಂಡಿದ್ದಾಳೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಬಾಲಕಿ ಕೊನೆಯುಸಿರೆಳೆದಿದ್ದಾಳೆಂದು ತಿಳಿದುಬಂದಿದೆ. ಮಣಿಪಾಲ ಆಸ್ಪತ್ರೆಯಲ್ಲಿ ಅನುಶ್ರೀ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ವರದಿ ನಿರೀಕ್ಷಿಸಲಾಗುತ್ತಿದೆ.
ಅನುಶ್ರೀಯ ಕಣ್ಣುಗಳನ್ನು ದಾನ ಮಾಡಲಾಗಿದ್ದು, ಗುರುವಾರ ರಾತ್ರಿ ಭಾರತಿಯವರ ತಾಯಿಯ ಮನೆ ಪರಿಸರದಲ್ಲಿ ಅಂತ್ಯಕ್ರಿಯೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.