ಕಾಪು : ಮರದ ದಿಮ್ಮಿ ಸಾಗಾಟದ ಲಾರಿಗೆ ಬೆಂಕಿ
ಕಾಪು, ಅ.28 : ಉಳಿಯಾರಗೋಳಿ ಕೋತಲಕಟ್ಟೆ ಬಳಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯ ಟಯರ್ ಸ್ಫೋಟಗೊಂಡು ಲಾರಿಗೆ ಬೆಂಕಿ ಹತ್ತಿಕೊಂಡ ಘಟನೆ ಇಂದು ಮುಂಜಾನೆ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 66 ರ ಬಿಕ್ಕೋ ಕಂಪೆನಿ ಬಳಿಯಲ್ಲಿ ಚಲಿಸುತ್ತಿದ್ದಂತೆ ಲಾರಿಯ ಟಯರ್ ಸ್ಫೋಟಗೊಂಡಿದೆ. ಪರಿಣಾಮ ಲಾರಿಯಲ್ಲಿ ಕಾಣಿಸಿಕೊಂಡ ಬೆಂಕಿ ಮರದ ದಿಮ್ಮಿಗೆ ವ್ಯಾಪಿಸಿದೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು, ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆಯಿಂದಾಗಿ ಲಾರಿಗೆ ಸಂಪೂರ್ಣ ಹಾನಿ ಸಂಭವಿಸಿದೆ. ಅರ್ಧದಷ್ಟು ಮರದ ದಿಮ್ಮಿಗಳು ಬೆಂಕಿಗಾಹುತಿಯಾಗಿವೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.