ಉಡುಪಿಯ ಹಿರಿಯ ವಕೀಲ ಸಂಕಪ್ಪ ಎ. ಅವರ “ಲಾ ಇನ್ ಆಕ್ಷನ್” ಕಾಪು ಕಛೇರಿ ಉದ್ಘಾಟನೆ
ಕಾಪು, ಆ.29(ಉಡುಪಿ ಟೈಮ್ಸ್ ವರದಿ): ಕಾಪುವಿನ ಬಿಲ್ಲವರ ಸಹಾಯಕ ಸಂಘದ ಬ್ರಹ್ಮಶ್ರೀ ನಾರಾಯಣ ಗುರು ಸಂಕೀರ್ಣದಲ್ಲಿ ನಿರ್ಮಾಣಗೊಂಡಿರುವ ಉಡುಪಿಯ ಹಿರಿಯ ನ್ಯಾಯವಾದಿ ಮತ್ತು ನೋಟರಿ ಪಬ್ಲಿಕ್ ಆಗಿರುವ ಸಂಕಪ್ಪ ಎ. ಅವರ ಲಾ ಇನ್ ಆ್ಯಕ್ಷನ್ ಇದರ ನೂತನ ಕಾಪು ಶಾಖಾ ಕಚೇರಿಯ ಉದ್ಘಾಟನಾ ಸಾಮಾರಂಭ ಅ.30 ರಂದು 8.30ಕ್ಕೆ ನಡೆಯಲಿದೆ.
ನೂತನ ಕಚೇರಿಯನ್ನು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರಧಾನ ಆರ್ಚಕ ವೇ. ಮೂ. ಶ್ರೀನಿವಾಸ ತಂತ್ರಿ ಕಲ್ಯ ಅವರು ಉದ್ಘಾಟಿಸಲಿದ್ದಾರೆ. ಕುಕ್ಕೆಹಳ್ಳಿಯ ಕೊರಗಜ್ಜ ಕ್ಷೇತ್ರದ ಧರ್ಮದರ್ಶಿ ಕೃಷ್ಣ ಕುಲಾಲ್ ಮತ್ತು ಕಾಪು ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನದ ಪ್ರಧಾನ ತಂತ್ರಿ ವೇ. ಮೂ. ಶ್ರೀಷ ತಂತ್ರಿ ಕಲ್ಯ ಅವರು ದೀಪ ಬೆಳಗಿಸಿ ಕಚೇರಿ ಕಾರ್ಯಾರಂಭಕ್ಕೆ ಚಾಲನೆ ನೀಡಲಿದ್ದಾರೆ.
ಹೆಜಮಾಡಿ ಸ್ವರ್ಣ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಶೇಖರ ಕರ್ಕೇರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗಿಶ್ ಶೆಟ್ಟಿ, ಕಾಪು ಪೊಲೀಸ್ ವೃತ್ತ ನಿರೀಕ್ಷಕ ಕೆ.ಸಿ, ಪೂವಯ್ಯ, ಕಾಪು ಠಾಣಾಧಿಕಾರಿ ಶ್ರೀಶೈಲ ಡಿ. ಮುರಗೋಡ, ಎಸ್‍ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ, ಕಾಪು ಬಿಲ್ಲವರ ಸಂಘದ ಅಧ್ಯಕ್ಷ ವಿಕ್ರಂ ಕಾಪು, ಕಾಪು ಬಿಲ್ಲವರ ಸಂಘದ ಗೌರವಾಧ್ಯಕ್ಷ ಪ್ರಭಾಕರ ಪೂಜಾರಿ, ಕಾಪು ಶ್ರೀ ಹಳೇ ಮಾರಿಗುಡಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಪ್ರಸಾದ್ ಶೆಣೈ, ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ರಮೇಶ್ ಹೆಗ್ಡೆ, ಸಮಾಜ ಸೇವಕರಾದ ಸೂರಿ ಶೆಟ್ಟಿ ಕಾಪು, ಗೀತಾಂಜಲಿ ಸುವರ್ಣ ಕಟಪಾಡಿ, ವಿಶ್ವನಾಥ ಶೆಣೈ ಉಡುಪಿ ಮತ್ತು ಉಡುಪಿ ಧರ್ಮಪ್ರಾಂತ್ಯದ ಕುಲಪತಿ ಅ.ವಂ.ಡಾ. ರೋಷನ್ ಡಿ.ಸೋಜಾ, ಮಲ್ಲಾರುವಿನ ಜಾಮಿಯಾ ಮಸೀದಿ ಅಧ್ಯಕ್ಷ ಸಾಬು ಸಾಹೇಬ್ ಖದೀಂ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.