ಕೆಎಂಸಿ ವತಿಯಿಂದ ಮಲ್ಪೆಯಲ್ಲಿ ವಿಶಿಷ್ಟವಾಗಿ ವಿಶ್ವ ಪಾರ್ಶ್ವವಾಯು ದಿನಾಚರಣೆ

ಉಡುಪಿ ಅ.29 (ಉಡುಪಿ ಟೈಮ್ಸ್ ವರದಿ) : ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ನರವಿಜ್ಞಾನ ವಿಭಾಗದ ವತಿಯಿಂದ ಮಲ್ಪೆ ಕಡಲ ತೀರದಲ್ಲಿ ಪಾರ್ಶ್ವವಾಯು ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಮರಳು ಕಲಾ ಶಿಲ್ಪವನ್ನು ಅನಾವರಣಗೊಳಿಸುವ ಮೂಲಕ ವಿಶ್ವ ಪಾರ್ಶ್ವವಾಯು ದಿನವನ್ನು ವಿಶಿಷ್ಟವಾಗಿ ಆಚರಿಸಲಾಯಿತು.

ಕೆಎಂಸಿ ಮಣಿಪಾಲದ ಡೀನ್ ಡಾ. ಶರತ್ ಕೆ ರಾವ್ ಅವರು ಮರಳು ಕಲಾ ಶಿಲ್ಪವನ್ನು ಅನಾವರಣಗೊಳಿಸಿದರು. ಬಳಿಕ ಮಾತನಾಡಿದ ಅವರು, “ಪಾರ್ಶ್ವವಾಯು ಅಂದರೆ ಮೆದುಳಿನ ರಕ್ತನಾಳದಲ್ಲಿ ರಕ್ತ ಹೆಪ್ಪುಗಟ್ಟಿ ಆ ಭಾಗವು ನಿಷ್ಕ್ರಿಯಗೊಳ್ಳುತ್ತದೆ. ಇದರಿಂದ ಶೇಕಡಾ 33 ರಷ್ಟು ಜನ ಸಾವನ್ನಪ್ಪುತ್ತಾರೆ. ಇನ್ನೂ ಶೇಕಡಾ 33 ರಷ್ಟು ಜನ ಶಾಶ್ವತ ಅಂಗನ್ಯೂನತೆ ಹೊಂದುತ್ತಾರೆ. ಇದನ್ನು ನಿಯಂತ್ರಿಸಲು ಸಮತೋಲನ ಆಹಾರ ಮತ್ತು ವ್ಯಾಯಾಮವು ಅವಶ್ಯಕ ಎಂದರು. ಹಾಗೂ ರೋಗಲಕ್ಷಣಗಳು ಕಂಡ 4-5 ಗಂಟೆಗಳ ಒಳಗೆ ಆಸ್ಪತ್ರೆಗೆ ಬಂದರೆ ಸಂಪೂರ್ಣ ಗುಣಮುಖರಾಗುವ ಸಾಧ್ಯತೆ ಹೆಚ್ಚಿದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಮಾಹೆಯ ಬೋಧನಾ ಆಸ್ಪತ್ರೆಗಳ ಮುಖ್ಯ ನಿರ್ವಹಣಾಧಿಕಾರಿ ಡಾ ಆನಂದ್ ವೇಣುಗೋಪಾಲ್, ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ, ನರವಿಜ್ಞಾನ ವಿಭಾಗದ ಮುಖ್ಯಸ್ಥೆ ಡಾ.ಅಪರ್ಣಾ ಆರ್.ಪೈ, ನರಶಸ್ತ್ರ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ.ಗಿರೀಶ್ ಮೆನನ್ ಆರ್, ಡಾ ಶ್ರೀಪದ್ಮ ವಿ. ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!