ದ.ಕ ಜಿಲ್ಲಾಧಿಕಾರಿಯಾಗಿ ಎಂ.ಆರ್.ರವಿಕುಮಾರ್ ಅಧಿಕಾರ ಸ್ವೀಕಾರ
ಮಂಗಳೂರು, ನ.2: ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಂ.ಆರ್.ರವಿಕುಮಾರ್ ಅವರು ಇಂದು ಅಧಿಕಾರ ಸ್ವೀಕರಿಸಿದರು.
ಈ ಹಿಂದೆ ದ.ಕ. ಜಿಲ್ಲಾಧಿಕಾರಿಯಾಗಿದ್ದ ಡಾ.ರಾಜೇಂದ್ರ ಕೆ.ವಿ. ಅವರು ಮೈಸೂರಿಗೆ ವರ್ಗಾವಣೆಗೊಂಡ ಬಳಿಕ ದ.ಕ ಜಿಲ್ಲಾ ಪಂಚಾಯತ್ ಸಿಇಒ ಡಾ. ಕುಮಾರ ಅವರನ್ನು ಪ್ರಭಾರ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿತ್ತು. ಇದೀಗ ಇಂದು ನೂತನ ಜಿಲ್ಲಾಧಿಕಾರಿಯಾದ ಎಂ.ಆರ್ ರವಿ ಕುಮಾರ್ ಅವರಿಗೆ ಪ್ರಭಾರ ಜಿಲ್ಲಾಧಿಕಾರಿಯಾಗಿದ್ದ ಡಾ. ಕುಮಾರ್ ಅವರು ಅಧಿಕಾರ ಹಸ್ತಾಂತರ ಮಾಡಿದರು.
ಎಂ.ಆರ್ ರವಿ ಕುಮಾರ್ ಅವರು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಆಗಿದ್ದರು. ಹಾಗೂ ಅವರನ್ನು ದ.ಕ. ಜಿಲ್ಲಾಧಿಕಾರಿಯಾಗಿ ನಿಯುಕ್ತಿಗೊಳಿಸಿ ರಾಜ್ಯ ಸರಕಾರ ಅ.31 ರಂದು ಆದೇಶ ಹೊರಡಿಸಿತ್ತು.