ವಿನಾಯಕ ಬಾಳಿಗಾ ಕೊಲೆ ಪ್ರಕರಣ : ವಿಶೇಷ ಅಭಿಯೋಜಕರಾಗಿ ವಕೀಲ ಎಸ್. ಬಾಲಕೃಷ್ಣನ್ ನೇಮಕ
ಮಂಗಳೂರು ನ.2 : ಆರ್.ಟಿ.ಐ. ಕಾರ್ಯಕರ್ತ ವಿನಾಯಕ ಬಾಳಿಗಾ ಕೊಲೆ ಪ್ರಕರಣದ ವಿಶೇಷ ಸರಕಾರಿ ಅಭಿಯೋಜಕರಾಗಿ ಬೆಂಗಳೂರಿನ ವಕೀಲ ಎಸ್. ಬಾಲಕೃಷ್ಣನ್ ಅವರನ್ನು ಸರಕಾರ ನೇಮಕ ಮಾಡಿದೆ.
2016 ಮಾರ್ಚ್ 21ರಂದು ಮಂಗಳೂರಿನ ವೆಂಕಟರಮಣ ದೇವಸ್ಥಾನದ ಸಮೀಪ ವಿನಾಯಕ ಬಾಳಿಗಾ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಕುರಿತು ಅನುರಾಧಾ ಬಾಳಿಗಾ ನೀಡಿದ ದೂರಿನ ಅನ್ವಯ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.