ವಾಯುಭಾರ ಕುಸಿತ: ಕರಾವಳಿ ಸೇರಿದಂತೆ ರಾಜ್ಯದಾದ್ಯಂತ 5 ದಿನಗಳು ಭಾರೀ ಮಳೆ

ಬೆಂಗಳೂರು ನ.2 : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಕರಾವಳಿ ಸೇರಿದಂತೆ ರಾಜ್ಯದಾದ್ಯಂತ ಇನ್ನು 5 ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ ನವೆಂಬರ್ 6 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಅವಧಿಯಲ್ಲಿ ರಾಜ್ಯದ ಕರಾವಳಿ, ಮಲೆನಾಡು, ಉತ್ತರ ಒಳನಾಡು, ಬೆಂಗಳೂರು ಭಾಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Leave a Reply

Your email address will not be published. Required fields are marked *

error: Content is protected !!