ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಪಿಡಿಒ ಯು.ಡಿ. ಶೇಖರ್ ಹೃದಯಾಘಾತದಿಂದ ನಿಧನ
ಕಡಬ ನ.3 : ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಪಿಡಿಒ ಯು.ಡಿ. ಶೇಖರ್ ರವರು ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಇಂದು ಬೆಳಗ್ಗೆ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡ ಅವರನ್ನು ತಕ್ಷಣ ಮನೆಯವರು ಸುಳ್ಯದ ಆಸ್ಪತ್ರೆಗೆ ದಾಖಲಿಸಿದರಾದರೂ ಅವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಮೃತರು ಪತ್ನಿ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಗೀತಾ ಶೇಖರ್ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಐವರ್ನಾಡು ಗ್ರಾಮ ಪಂಚಾಯತ್ ನಲ್ಲಿ ದೀರ್ಘ ಕಾಲ ಸೇವೆ ಸಲ್ಲಿದ್ದ ಶೇಖರ್ ರವರು ಬಳಿಕ ಸುಬ್ರಹ್ಮಣ್ಯ ಗ್ರಾ.ಪಂ. ಪಿಡಿಒ ಆಗಿ ವರ್ಗಾವಣೆಯಾಗಿದ್ದರು.