ಗುಜರಾತ್ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ

ಹೊಸದಿಲ್ಲಿ ನ.3 : ಬಹು ನಿರೀಕ್ಷಿತ ಗುಜರಾತ್ ವಿಧಾನಸಭೆಯ ಚುನಾವಣೆಯ ವೇಳಾಪಟ್ಟಿ ಇಂದು ಪ್ರಕಟವಾಗಿದೆ.

ಈ ಬಗ್ಗೆ ಇಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಪತ್ರಿಕಾಗೋಷ್ಠಿ ನಡೆಸಿ ವೇಳಾಪಟ್ಟಿಯನ್ನು ಪ್ರಕಟ ಮಾಡಿದ್ದಾರೆ. ಬಳಿಕ ಈ ವಿಚಾರವಾಗಿ ಮಾಹಿತಿ ನೀಡಿದ ಅವರು, ಚುನಾವಣೆಯ ಮತದಾನ ಎರಡು ಹಂತಗಳಲ್ಲಿ ನಡೆಯಲಿದೆ. ಮೊದಲ ಹಂತದ ಮತದಾನವು ಡಿಸೆಂಬರ್ 1ರಂದು ಹಾಗೂ ಎರಡನೇ ಹಂತದ ಮತದಾನವು ಡಿ.5ರಂದು ನಡೆಯಲಿದೆ. ಚುನಾವಣೆ ಹಿನ್ನೆಲೆಯಲ್ಲಿ ಶಿಪ್ಪಿಂಗ್ ಕಂಟೈನರ್ ನಲ್ಲಿ ಒಂದು, ಕೇವಲ ಒಬ್ಬ ಮತದಾರರಿಗೆ ಮತ್ತು ಜಫ್ರಾಬಾದ್ ಪಟ್ಟಣದ ಸಮೀಪವಿರುವ ಅರಬ್ಬಿ ಸಮುದ್ರದ ದ್ವೀಪದಲ್ಲಿ ಒಂದು ಸೇರಿದಂತೆ ಹಲವಾರು ವಿಶಿಷ್ಟ ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ತಿಳಿಸಿದರು.

ಹಾಗೂ ಮತ ಎಣಿಕೆ ಕಾರ್ಯವು ಡಿ.8ರಂದು ನಡೆಯಲಿದೆ. ಇದೇ ದಿನದಂದು ಹಿಮಾಚಲ ಪ್ರದೇಶ ಚುನಾವಣೆಯ ಮತ ಎಣಿಕೆಯೂ ನಡೆಯಲಿದೆ ಅವರು ಮಾಹಿತಿ ನೀಡಿದರು.

Leave a Reply

Your email address will not be published. Required fields are marked *

error: Content is protected !!