ನಾಳೆ ರೈತ ಸಂಘಟನೆಗಳಿಂದ ‘ವಿಧಾನಸೌಧ’ ಮುತ್ತಿಗೆಗೆ ಕರೆ

ಬೆಂಗಳೂರು : ಕೇಂದ್ರದ ರೈತವಿರೋಧಿ ಮಸೂದೆಗಳಿಗೆ ವಿರೋಧಿಸಿ ರಾಜ್ಯದಲ್ಲಿ ನಡೆಸುತ್ತಿರುವ ಪ್ರತಿಭಟನೆ ಮತ್ತಷ್ಟು ತಾರಕ್ಕೆ ಏರುವ ಸಾಧ್ಯತೆಗಳಿವೆ. ಈಗಾಗಲೇ ನಾಳೆ ಕರ್ನಾಟಕದಲ್ಲಿ ರೈತರು ಪ್ರತಿಭಟನೆಗೆ ಇಳಿಯಲು ನಿರ್ಧರಿಸಿದ್ದು, ರಾಜ್ಯದ ಶಕ್ತಿ ಸೌಧ ವಿಧಾನಸೌಧಕ್ಕೆ ರೈತರು ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ.
ಈ ಬಗ್ಗೆ ರೈತ ಸಂಘದ ಕೋಡಿಹಳ್ಳಿ ಚಂದ್ರಶೇಖರ್ ಅವರು ಮಾಹಿತಿ ನೀಡಿ, ನಾಳೆಯಿಂದ ನಮ್ಮ ರೈತರ ಹೋರಾಟ ಮತ್ತಷ್ಟು ಚುರುಕು ಪಡೆಯಲಿದೆ. ಇಂದಿನ ಭಾರತ್ ಬಂದ್ ಬಳಿಕ ನಾಳೆಯೂ ನಮ್ಮ ಪ್ರತಿಭಟನೆ ಮುಂದುವರೆಯಲಿದೆ. ನಾಳೆ ವಿಧಾನ ಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧಾರವನ್ನು ಕೈಗೊಳ್ಳಲಾಗಿದ್ದು, ಈ ಮುತ್ತಿಗೆ ಪ್ರತಿಭಟನೆಯಲ್ಲಿ ೧೦ ಸಾವಿರಕ್ಕೂ ಹೆಚ್ಚು ರೈತರು ಭಾಗವಹಿಸಲಿದ್ದು, ಈ ಮೂಲಕ ರೈತ ವಿರೋಧಿ ಮಸೂದೆಗಳ ವಿರುದ್ಧ ತೀವ್ರವಾಗಿ ಪ್ರತಿಭಟನೆ ನಡೆಸುವುದಾಗಿ ಹೇಳಿದರು.

Leave a Reply

Your email address will not be published. Required fields are marked *

error: Content is protected !!