ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ತಲೆಮರೆಸಿಕೊಂಡಿರುವ ಆರೋಪಿಗಳಿಗೆ ಮುಂದುವರೆದೆ ಶೋಧ

ಪುತ್ತೂರು ನ.4 : ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಪಿಎಫ್ಐ ಸಂಘಟನೆಯ ನಾಲ್ವರಿಗೆ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಲುಕೌಟ್‌ ನೋಟಿಸ್‌ ಜಾರಿ ಮಾಡಿದ್ದು,  ಎನ್‌ಐಎಯ 6 ಜನರ ತಂಡವು ತಂತ್ರಜ್ಞಾನ ಆಧಾರಿತ ಮಾಹಿತಿ ಆಧಾರದಲ್ಲಿ ಪುತ್ತೂರು ಸುತ್ತಮುತ್ತ ಶೋಧ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದೆ.

ಈ ಅರೋಪಿಗಳ ಪತ್ತೆಗಾಗಿ  ಅಧಿಕಾರಿಗಳು ಪುತ್ತೂರು, ಸುಳ್ಯ, ಬೆಳ್ಳಾರೆ ಸಹಿತ ಹಲವೆಡೆ ಬಸ್‌ ನಿಲ್ದಾಣ, ರೈಲು ನಿಲ್ದಾಣ ಹಾಗೂ ಇನ್ನಿತರ ಸಾರ್ವಜನಿಕ ಸ್ಥಳಗಳಲ್ಲಿ ಹುಡುಕಾಟ ಆರಂಭಿಸಿದ್ದಾರೆ. ಹಾಗೂ ಈ ಸ್ಥಳಗಳಲ್ಲಿ ಆರೋಪಿಗಳ ಭಾವಚಿತ್ರ ಇರುವ ಪೋಸ್ಟರ್‌ ಅಂಟಿಸಿ ಪತ್ತೆಗೆ ಸಹಕರಿಸಲು ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!