ಯಕ್ಷಗಾನ ಕಾಲಮಿತಿ ನಿರ್ಧಾರ ಹಿಂಪಡೆಯಲು ಆಗ್ರಹಿಸಿ ಕಟೀಲಿಗೆ ಪಾದಯಾತ್ರೆ

ಮಂಗಳೂರು ನ.4 : ಕಟೀಲು ಯಕ್ಷಗಾನ ಮೇಳಗಳ ಪ್ರದರ್ಶನವನ್ನು ಕಾಲಮಿತಿಗೊಳಪಡಿಸುವ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ನ.6 ರಂದು ಬೆಳಗ್ಗೆ ಬಜಪೆ ಶ್ರೀ ಶಾರದಾ ಶಕ್ತಿ ಮಂಟಪದಿಂದ ಶ್ರೀ ಕ್ಷೇತ್ರ ಕಟೀಲಿಗೆ ಪಾದಯಾತ್ರೆ ಆಯೋಜಿಸಲಾಗಿದೆ ಎಂದು ಸಮನ್ವಯ ಸಮಿತಿ ಸಂಚಾಲಕ ಅಶೋಕ ಕೃಷ್ಣಾಪುರ ಅವರು ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಅವರು, ಕಟೀಲು ಯಕ್ಷಗಾನ ಮೇಳಗಳ ಪ್ರದರ್ಶನವನ್ನು ಕಾಲಮಿತಿಗೊಳಪಡಿಸುವ ನಿರ್ಧಾರವನ್ನು ಹಿಂಪಡೆಯಬೇಕು ಹಾಗೂ ಯಕ್ಷಗಾನ ಪರಂಪರೆಯಂತೆ ರಾತ್ರಿಯಿಂದ ಬೆಳಗ್ಗಿನವರೆಗೆ ಯಕ್ಷಗಾನ ಪ್ರದರ್ಶನಗೊಳ್ಳಬೇಕು ಎಂದು ಆಗ್ರಹಿಸಿ ಶ್ರೀ ಕಟೀಲು ಮೇಳದ ಯಕ್ಷಗಾನ ಸೇವಾ ಸಮಿತಿಗಳು ಮತ್ತು ಖಾಯಂ ಸೇವಾದಾರರ ಒಕ್ಕೂಟವಾದ ಶ್ರೀ ಕಟೀಲು ಯಕ್ಷಸೇವಾ ಸಮನ್ವಯ ಸಮಿತಿ ದಕ್ಷಿಣ ಕನ್ನಡ ಮತ್ತು ಉಡುಪಿ ವತಿಯಿಂದ ನ. 6ರಂದು ಬೆಳಗ್ಗೆ 8.30 ರಿಂದ ಬಜಪೆ ಶ್ರೀ ಶಾರದಾ ಶಕ್ತಿ ಮಂಟಪದಿಂದ ಶ್ರೀ ಕ್ಷೇತ್ರ ಕಟೀಲಿಗೆ ಪಾದಯಾತ್ರೆ ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!