ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ತಿಮ್ಮಪ್ಪ ಶೆಟ್ಟಿ ನೇಮಕ

ಮಂಗಳೂರು ನ.7 (ಉಡುಪಿ ಟೈಮ್ಸ್ ವರದಿ) : ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಮಂಗಳೂರು ಇದರ ಅಧ್ಯಕ್ಷರಾಗಿ ಬಲ್ನಾಡು ಗ್ರಾಮದ ತಿಮ್ಮಪ್ಪ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ.

ಸರಕಾರದ ಸೂಚನೆಯಂತೆ ಈ ಹಿಂದೆ ಕರಾವಳಿ ಅಭಿವೃಧ್ಧಿ ಪ್ರಾಧಿಕಾರದ ಧ್ಯಕ್ಷರಾಗಿದ್ದ ಮಟ್ಟಾರು ರತ್ನಾಕರ ಹೆಗ್ಡೆ ಅವರ ನಾಮ ನಿರ್ದೇಶನವನ್ನು ರದ್ದು ಪಡಿಸಿರುವ ಹಿನ್ನೆಲೆಯಲ್ಲಿ, ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದ ತಿಮ್ಮಪ್ಪ ಶೆಟ್ಟಿ ಅವರನ್ನು ಮಂಗಳೂರಿನ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ ಎಂದು ಪ್ರಾಧಿಕಾರದ ಕಾರ್ಯದರ್ಶಿಯವರು ಪ್ರಟಕಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published.

error: Content is protected !!