ಭಾರತದಲ್ಲಿ ಕೋಟಿ ದಾಟಿದ ಕೊರೊನ ಸೋಂಕಿತರ ಸಂಖ್ಯೆ
ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಪತ್ತೆಯಾಗುತ್ತಿರುವ ಪ್ರಮಾಣ ಕಡಿಮೆಯಾಗಿದೆ ಇದರೊಂದಿಗೆ ಕೋವಿಡ್ನಿಂದ ಗುಣಮುಖರಾಗುತ್ತಿರುವವರ ಸಂಖ್ಯೆಯೂ ಗಣನೀಯವಾಗಿ ಏರಿಕೆ ಕಂಡಿದೆ. ಆದ್ರೆ ಸದ್ಯ ಬಂದ ಮಾಹಿತಿಯ ಪ್ರಕಾರ ದೇಶದಲ್ಲಿ ಈ ವರೆಗೆ ಪತ್ತೆಯಾದ ಒಟ್ಟು ಸೋಂಕಿತರ ಸಂಖ್ಯೆ ಒಂದು ಕೋಟಿ ದಾಟಿದೆ. ಕಳೆದ 24 ಗಂಟೆಗಳಲ್ಲಿ 25,152 ಹೊಸ ಪ್ರಕರಣಗಳು ಪತ್ತೆಯಾಗುವ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,000,4,599 ಕ್ಕೆ ಏರಿಕೆಯಾಗಿದೆ.
ಆದರೆ, ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೋಟಿ ಗಡಿ ದಾಟಿದರೂ ಈಗಾಗಲೇ 95 ಲಕ್ಷಕ್ಕೂ ಹೆಚ್ಚು ಮಂದಿ ಗುಣಮುಖರಾಗಿರುವುದು ಸದ್ಯದ ಮಟ್ಟಿಗೆ ಖುಷಿಯ ವಿಚಾರ,ಸದ್ಯ, ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಎಂದರೆ 18.88 ಲಕ್ಷ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡರೆ, ಕರ್ನಾಟಕದಲ್ಲಿ 9.07, ಆಂಧ್ರದಲ್ಲಿ 8.77, ತಮಿಳುನಾಡಿನಲ್ಲಿ 8.04, ಕೇರಳದಲ್ಲಿ 6.93 ಹಾಗೂ ದೆಹಲಿಯಲ್ಲಿ 6.14 ಲಕ್ಷ ಮಂದಿಯಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಕೊರೊನಾ ಸೋಂಕು ಉಲ್ಬಣಗೊಳ್ಳುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ ಕೇಂದ್ರ ಸರ್ಕಾರ ಸೋಂಕು ತಡೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿತ್ತು.ಇದುವರೆಗೂ ದೇಶಾದ್ಯಂತ 16 ಕೋಟಿಗೂ ಹೆಚ್ಚು ಮಂದಿಗೆ ಕೊರೊನಾ ತಪಾಸಣೆ ನಡೆಸಲಾಗಿದ್ದು, ಸೋಂಕು ಕಾಣಿಸಿಕೊಂಡ ವ್ಯಕ್ತಿಗಳಿಗೆ ಅಗತ್ಯ ಔಷಧೋಪಚಾರ ಮಾಡಿದ ಹಿನ್ನೆಲೆಯಲ್ಲಿ ಸಾವಿನ ಪ್ರಮಾಣ ಶೇ.1.45ಕ್ಕೆ ಇಳಿಕೆಯಾಗಿದೆ ಎಂದು ಮೂಲಗಳು ತಿಳಿಸಿವೆ.