ಉದಾರೀಕರಣಕ್ಕಾಗಿ ದೇಶವು ಮನಮೋಹನ್ ಸಿಂಗ್ ಅವರಿಗೆ ಋಣಿಯಾಗಿದೆ : ಕೇಂದ್ರ ಸಚಿವ ನಿತಿನ್‌ ಗಡ್ಕರಿ

ಹೊಸದಿಲ್ಲಿ ನ.9 : ಆರ್ಥಿಕ ಸುಧಾರಣೆಗಳಿಗಾಗಿ ಹೊಸ ದಿಕ್ಕನ್ನು ನೀಡಿದ ಉದಾರೀಕರಣಕ್ಕಾಗಿ ದೇಶವು ಮನಮೋಹನ್ ಸಿಂಗ್ ಅವರಿಗೆ ಋಣಿಯಾಗಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಹೇಳಿದ್ದಾರೆ.

ಟಿಐಒಎಲ್ ಅವಾರ್ಡ್ಸ್ 2022 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಡ ಜನರಿಗೆ ಅದರ ಪ್ರಯೋಜನಗಳನ್ನು ಒದಗಿಸುವ ಉದ್ದೇಶದಿಂದ ಭಾರತಕ್ಕೆ ಉದಾರ ಆರ್ಥಿಕ ನೀತಿಯ ಅಗತ್ಯವಿದೆ. ಯಾವುದೇ ದೇಶದ ಅಭಿವೃದ್ಧಿಗೆ ಉದಾರ ಆರ್ಥಿಕ ನೀತಿ ಹೇಗೆ ಸಹಾಯ ಮಾಡುತ್ತದೆ ಎಂಬುದಕ್ಕೆ ಚೀನಾ ಉತ್ತಮ ಉದಾಹರಣೆಯಾಗಿದೆ. ಅಲ್ಲದೆ ಆರ್ಥಿಕ ಬೆಳವಣಿಗೆಯನ್ನು ವೇಗಗೊಳಿಸಲು, ಭಾರತಕ್ಕೆ ಹೆಚ್ಚಿನ ಕ್ಯಾಪೆಕ್ಸ್ ಹೂಡಿಕೆಯ ಅಗತ್ಯವಿದೆ ಎಂದರು.

ಹಾಗೂ 1991 ರಲ್ಲಿ ವಿತ್ತ ಸಚಿವರಾಗಿ ಮನಮೋಹನ್ ಸಿಂಗ್  ಅವರು ಪ್ರಾರಂಭಿಸಿದ ಆರ್ಥಿಕ ಸುಧಾರಣೆಗಳು ಭಾರತಕ್ಕೆ ಹೊಸ ದಿಕ್ಕನ್ನು ನೀಡಿತು. ಹಾಗೂ ಅದು ಉದಾರ ಆರ್ಥಿಕತೆಗೆ ನಾಂದಿ ಹಾಡಿತು. ಹೊಸ ದಿಕ್ಕನ್ನು ನೀಡಿದ ಉದಾರೀಕರಣಕ್ಕಾಗಿ ದೇಶವು ಮನಮೋಹನ್ ಸಿಂಗ್ ಅವರಿಗೆ ಋಣಿಯಾಗಿದೆ” ಎಂದು ತಿಳಿಸಿದರು.

ಇದರ ಜೊತೆಗೆ 1990 ರ ದಶಕದ ಮಧ್ಯಭಾಗದಲ್ಲಿ ತಾನು ಮಹಾರಾಷ್ಟ್ರದಲ್ಲಿ ಸಚಿವರಾಗಿದ್ದಾಗ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರು ಪ್ರಾರಂಭಿಸಿದ ಆರ್ಥಿಕ ಸುಧಾರಣೆಗಳಿಂದಾಗಿ ಮಹಾರಾಷ್ಟ್ರದಲ್ಲಿ ರಸ್ತೆಗಳನ್ನು ನಿರ್ಮಿಸಲು ಹಣವನ್ನು ಸಂಗ್ರಹಿಸಲು ಸಾಧ್ಯವಾಯಿತು ಎಂದು ಅವರು ಹೇಳಿದರು.

Leave a Reply

Your email address will not be published. Required fields are marked *

error: Content is protected !!