ನೇಪಾಳದಲ್ಲಿ ಭೂಕಂಪ : 6 ಮಂದಿ ಮೃತ್ಯು-ದಿಲ್ಲಿಯಲ್ಲೂ ಭೂಕಂಪನ
ಹೊಸದಿಲ್ಲಿ ನ.9 : ನೇಪಾಳದ ದೋಟಿ ಜಿಲ್ಲೆಯಲ್ಲಿ ಇಂದು ನಸುಕಿನ ವೇಳೆ ಭೂಕಂಪ ಸಂಬವಿಸಿದ್ದು ಮನೆ ಕುಸಿದು ಆರು ಮಂದಿ ಮೃತಪಟ್ಟಿದ್ದಾರೆ.
ನೇಪಾಳದಲ್ಲಿ ಕಳೆದ 24 ಗಂಟೆಗಳಲ್ಲಿ ಸಂಭವಿಸಿದ ಎರಡನೇ ಭೂಕಂಪ ಇದಾಗಿದ್ದು, ಈ ಭೂ ಕಂಪನದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 6.3 ರಷ್ಟು ತೀವ್ರತೆ ದಾಖಲಾಗಿದೆ. ಈ ನಡುವೆ ನಸುಕಿನ 2 ಗಂಟೆ ಸುಮಾರಿಗೆ ದಿಲ್ಲಿ ಹಾಗೂ ಅಕ್ಕಪಕ್ಕದ ಪ್ರದೇಶಗಳಲ್ಲಿ ಕೂಡಾ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.
ಭೂಕಂಪ ನೆಲಮಟ್ಟದಿಂದ ಸುಮಾರು 10 ಕಿಲೋಮೀಟರ್ ಆಳದಲ್ಲಿ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ಮಾಪನ ಕೇಂದ್ರ ಹೇಳಿದ್ದು, ಭೂಕಂಪದ ಕೇಂದ್ರಬಿಂದು ನೇಪಾಳದ ಗಡಿಗೆ ಹೊಂದಿಕೊಂಡಿರುವ ಉತ್ತರಾಖಂಡದ ಪಿತ್ತೋರ್ ಗಢದಲ್ಲಿತ್ತು ಎಂದು ತಿಳಿದು ಬಂದಿದೆ.
ಮಂಗಳವಾರ ಮುಂಜಾನೆ ಕೂಡಾ ನೇಪಾಳದಲ್ಲಿ 4.5 ತೀವ್ರತೆಯ ಭೂಕಂಪ ಸಂಭವಿಸಿತ್ತು. ಹಿಂದಿನ ಭೂಕಂಪ ಕಠ್ಮಂಡುವಿನಿಂದ 155 ಕಿಲೋಮೀಟರ್ ಈಶಾನ್ಯಕ್ಕೆ 100 ಕಿಲೋ ಮೀಟರ್ ಆಳದಲ್ಲಿ ಸಂಭವಿಸಿತ್ತು ಎಂದು ಮಾಧ್ಯಮ ವರದಿಯಲ್ಲಿ ತಿಳಿಸಲಾಗಿದೆ.