ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ- ಇಬ್ಬರ ವಿಚಾರಣೆ

ಮಂಗಳೂರು: ನಗರದ ರಥಬೀದಿಯ ಬಳಿಯ ಕರ್ತವ್ಯನಿರತ ಹೆಡ್ ಕಾನ್‌ಸ್ಟೆಬಲ್ ಮೇಲೆ ತಲವಾರಿನಿಂದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ವಶಕ್ಕೆ ಪಡೆದ ಆರೋಪಿಗಳನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಈ ಹಲ್ಲೆಗೆ ಕಾರಣ ಏನೆಂದು ತಿಳಿಯಲು ಪ್ರಯತ್ನಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಡಿ.16 ರಂದು ಮಂಗಳೂರಿನ ರಥಬೀದಿ ಸಮೀಪದ ಚಿತ್ರಮಂದಿರವೊಂದರ ಬಳಿ ಹೆಡ್‌ಕಾನ್‌ಸ್ಟೇಬಲ್ ಗಣೇಶ ಅವರು ಇಬ್ಬರು ಸಿಬ್ಬಂದಿಗಳ ಜೊತೆ ವಾಹನಗಳ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಬೈಕಿನಲ್ಲಿ ಬಂದ ಅಪರಿಚಿತ ದುಷ್ಕರ್ಮಿಯೋರ್ವ ಮುಖ್ಯ ಪೇದೆ ಗಣೇಶ ಕಾಮತ್‌ರಿಗೆ ತಲವಾರಿನಿಂದ ಹಲ್ಲೆಗೈದಿದ್ದಾನೆ.

ಈ ಬಗ್ಗೆ ಮಾಹಿತಿ ತಿಳಿದ ಮಂಗಳೂರು ಉತ್ತರ (ಬಂದರ್) ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಇದೀಗ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

error: Content is protected !!