ಉಡುಪಿ : ಅಗ್ನಿಶಾಮಕ ಸಹಾಯಕ ಠಾಣಾಧಿಕಾರಿ ಮುಹಮ್ಮದ್ ಗೌಸ್ ರಿಗೆ ರಾಷ್ಟ್ರಪತಿ ಪದಕ ಪ್ರದಾನ

ಉಡುಪಿ, ನ.9 : 2021ನೇ ಸಾಲಿನ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕವನ್ನು ಉಡುಪಿ ಅಗ್ನಿಶಾಮಕ ಸಹಾಯಕ ಠಾಣಾಧಿಕಾರಿ ಮೀರ್ ಮುಹಮ್ಮದ್ ಗೌಸ್ ಅವರಿಗೆ ನೀಡಿ ಗೌರವಿಸಲಾಗಿದೆ.

ನ.7 ರಂದು ಬೆಂಗಳೂರಿನ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಠಾಣಾಧಿಕಾರಿ ಮೀರ್ ಮುಹಮ್ಮದ್ ಗೌಸ್ ಅವರಿಗೆ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕವನ್ನು ನೀಡಿ ಅಭಿನಂದಿಸಿದರು.

1992ರಲ್ಲಿ ಅಗ್ನಿಶಾಮಕ ಇಲಾಖೆಗೆ ಸೇರ್ಪಡೆಗೊಂಡ ಮೀರ್ ಮುಹಮ್ಮದ್ ಗೌಸ್ ಅವರು, 30 ವರ್ಷ ಗಳ ಸೇವಾ ಅವಧಿಯಲ್ಲಿ ಪ್ರಮುಖ ಅಗ್ನಿಶಾಮಕರಾಗಿ ಪದೋನ್ನತಿ ಹೊಂದಿ ಪ್ರಸ್ತುತ ಸಹಾಯಕ ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನಿಸ್ವಾರ್ಥ ಸೇವೆಯ ಗೌರವಾರ್ಥವಾಗಿ ಇವರಿಗೆ ಇಲಾಖೆಯು 33 ಬಾರಿ ನಗದು ಬಹುಮಾನಗಳು, 2 ಉತ್ತಮ ಸೇವೆ ಪತ್ರಗಳನ್ನು ನೀಡಲಾಗಿದೆ. ಇವರಿಗೆ 2012ರಲ್ಲಿ ಮುಖ್ಯಮಂತ್ರಿಗಳ ಚಿನ್ನದ ಪದಕವನ್ನು ನೀಡಿ ಗೌರವಿಸಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published.

error: Content is protected !!