ಜಮ್ಮು ಕಾಶ್ಮೀರ : 2 ಬಸ್‌ಗಳು  ಮುಖಾಮುಖಿ ಡಿಕ್ಕಿ – 3 ಮಂದಿ ಮೃತ್ಯು, ಹಲವರಿಗೆ ಗಾಯ

ಕಾಶ್ಮೀರ, ನ. 10 : ಜಮ್ಮು ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿ 2 ಬಸ್‌ಗಳ ನಡುವೆ  ನಡೆದ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೃತರನ್ನು ಮಂಗಿ ದೇವಿ (36), ತಾನಿಯಾ(13) ,ಕಸ್ತೂರಿ ಲಾಲ್ (58) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ 17 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Leave a Reply

Your email address will not be published. Required fields are marked *

error: Content is protected !!