ಪಡುಬಿದ್ರೆ: ಆಕಸ್ಮಿಕವಾಗಿ ನೀರಿಗೆ ಬಿದ್ದು ವ್ಯಕ್ತಿ ಸಾವು
ಪಡುಬಿದ್ರೆ: ಮೀನು ಹಿಡಿಯುತ್ತಿದ್ದಾಗ ಆಕಸ್ಮಿಕವಾಗಿ ನೀರಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕಾಪು ತಾಲೂಕಿನ ಹೆಜಮಾಡಿ ಗ್ರಾಮದ ಶಾಂಭವಿ ನದಿಯ ಕಿಂಡಿ ಆಣೆಕಟ್ಟಿನ ಬಳಿ ನಡೆದಿದೆ. ವಿಜಯ್ ಬೋನಾವೆಂಚರ್ ಫುಟಾರ್ಡೊ (44) ನೀರು ಪಾಲಾದ ವ್ಯಕ್ತಿ.
ವಿದೇಶದಲ್ಲಿ ಕೆಲಸ ಮಾಡಿಕೊಂಡಿದ್ದ ಇವರು, ಒಂದು ವರ್ಷದ ಹಿಂದೆ ಊರಿಗೆ ಬಂದು ಮೀನುಗಾರಿಕೆ ನಡೆಸುತ್ತಿದ್ದರು. ಎಂದಿನಂತೆ ನಿನ್ನೆ(ಡಿ.18) ರಂದು ಶಾಂಭವಿ ನದಿಯ ಕಿಂಡಿ ಆಣೆಕಟ್ಟಿನ ಬಳಿ ನದಿಯಲ್ಲಿ ಮೀನು ಹಿಡಿಯುತ್ತಿದ್ದ ವೇಳೆ ಆಸಕ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ. ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.