ರೀಲ್ಸ್, ಶಾಟ್ರ್ಸ್ ಮಾಡಲು ಕ್ಯಾಮೆರಾ ಕಳ್ಳತನ : ಪದವಿ ವಿದ್ಯಾರ್ಥಿ ಬಂಧನ

ಬೆಂಗಳೂರು ನ.11 : ವಿಡಿಯೋ ಚಿತ್ರೀಕರಣಕ್ಕೆ ಅಗತ್ಯವಿರುವ ಕ್ಯಾಮೆರಾ ಹಾಗೂ ಇತರೆ ವಸ್ತುಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪದಡಿ ಯುವಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಕಾಲೇಜೊಂದರಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ ಸ್ಥಳೀಯ ನಿವಾಸಿ ಪ್ರಜ್ವಲ್(20 ) ಬಂಧಿತ ಆರೋಪಿ. ಬಂಧಿತನಿಂದ 3.68 ಲಕ್ಷ ಮೌಲ್ಯದ 2 ಕ್ಯಾಮೆರಾ, ಲೆನ್ಸ್ ಹಾಗೂ ಆ್ಯಪಲ್ ಕಂಪನಿಯ ಎರಡು ಇಯರ್ ಪಾಡ್‌ಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ. ಹಾಗೂ ಹೊಸ ರೀತಿಯಲ್ಲಿ ಗುಣಮಟ್ಟದ ರೀಲ್ಸ್ ಹಾಗೂ ಶಾರ್ಟ್ಸ್ ವಿಡಿಯೋ ಮಾಡುವ ಉದ್ದೇಶಕ್ಕಾಗಿ ಕ್ಯಾಮೆರಾ ಕಳ್ಳತನ ಮಾಡಿದ್ದಾಗಿ ಆರೋಪಿ ಹೇಳಿಕೆ ನೀಡಿದ್ದಾನೆ’ ಎಂದು ಹೇಳಿದ್ದಾರೆ.

ಸ್ಲಿಪ್ ಕಾರ್ಟ್ ನ  ಡೆಲಿವರಿ ಬಾಯ್ ಯೊಬ್ಬರು ನೀಡಿದ ದೂರು ಆಧರಿಸಿ ಪ್ರಜ್ವಲ್‌ನನ್ನು ಬಂಧಿಸಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸರು ಇನ್‌ಸ್ಟಾಗ್ರಾಂ ಹಾಗೂ ಯೂಟ್ಯೂಬ್ ಸಾಮಾಜಿಕ ಮಾಧ್ಯಮಗಳಲ್ಲಿ ಆರೋಪಿ ಪ್ರಜ್ವಲ್ ಖಾತೆ ತೆರೆದಿದ್ದ. ರೀಲ್ಸ್ ಹಾಗೂ ಶಾರ್ಟ್ಸ್ ವಿಡಿಯೋ ಮಾಡುವ ಹವ್ಯಾಸ ಬೆಳೆಸಿಕೊಂಡಿದ್ದ. ಆರಂಭದಲ್ಲಿ ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಿಸಿ, ಅಪ್‌ಲೋಡ್ ಮಾಡುತ್ತಿದ್ದ. ಆದರೆ, ವಿಡಿಯೋ ಗುಣಮಟ್ಟ ಚೆನ್ನಾಗಿಲ್ಲವೆಂದು ಹಲವರು ಕಾಮೆಂಟ್ ಮಾಡುತ್ತಿದ್ದರು. ಹೀಗಾಗಿ, ಹೊಸ ಕ್ಯಾಮೆರಾ ಖರೀದಿಸಲು ಆರೋಪಿ ಮುಂದಾಗಿದ್ದ.’ ಆದರೆ ‘ಕ್ಯಾಮೆರಾ ಖರೀದಿಗೆ ಅಗತ್ಯವಿರುವ ಹಣ ಆರೋಪಿ ಬಳಿ ಇರಲಿಲ್ಲ. ಹೀಗಾಗಿ, ಕ್ಯಾಮೆರಾ ಕಳ್ಳತನ ಮಾಡಲು ಸಂಚು ರೂಪಿಸಿದ್ದ. ಮದುವೆ ನಡೆಯುತ್ತಿದ್ದ ಮಂಟಪವೊಂದಕ್ಕೆ ಸಂಬಂಧಿಕರ ಸೋಗಿನಲ್ಲಿ ಹೋಗಿದ್ದ ಆರೋಪಿ, ಅಲ್ಲಿಯ ಛಾಯಾಗ್ರಾಹಕರ ಕ್ಯಾಮೆರಾ ಕದ್ದು ಪರಾರಿಯಾಗಿದ್ದ’ ಎಂದು ತಿಳಿಸಿದ್ದಾರೆ.

ಅಲ್ಲದೆ ‘ಫಿಪ್‌ಕಾರ್ಟ್‌ ಜಾಲತಾಣದಲ್ಲಿ ಹೊಸ ಕ್ಯಾಮೆರಾವನ್ನು ಆರೋಪಿ ಕಾಯ್ದಿರಿಸಿದ್ದ. ಕ್ಯಾಮೆರಾ ನೀಡುವುದಕ್ಕಾಗಿ ಡೆಲಿವರಿ ಬಾಯ್, ಸೆ. 27ರಂದು ನಿಗದಿತ ವಿಳಾಸಕ್ಕೆ ಹೋಗಿದ್ದರು. ಅವರನ್ನು ಭೇಟಿಯಾಗಿದ್ದ ಆರೋಪಿ, ಕ್ಯಾಮೆರಾ ಬಾಕ್ಸ್ ಕಿತ್ತುಕೊಂಡು ಹಣ ನೀಡದೇ ಸ್ಥಳದಿಂದ ಪರಾರಿಯಾಗಿದ್ದ’ ಎಂದು ಹೇಳಿದ್ದಾರೆ.

‘ಕಳ್ಳತನದ ಸಂಬಂಧ ಡೆಲಿವರಿ ಬಾಯ್ ದೂರು ನೀಡಿದ್ದರು. ಸಿಸಿಟಿವಿ ಕ್ಯಾಮೆರಾ ದೃಶ್ಯ ಆಧರಿಸಿ ತನಿಖೆ ಕೈಗೊಂಡಾಗ ಆರೋಪಿ ಸಿಕ್ಕಿಬಿದ್ದಿದ್ದಾನೆ. ಇಷ್ಟುಮಾತ್ರವಲ್ಲದೆ ‘ಬಸವನಗುಡಿ ಠಾಣೆ ವ್ಯಾಪ್ತಿಯ ಪ್ರದೇಶವೊಂದರಲ್ಲಿ ಸಿನಿಮಾ ಚಿತ್ರೀಕರಣ ನಡೆಯುತ್ತಿದ್ದ ಸ್ಥಳಕ್ಕೆ ಹೋಗಿದ್ದ ಆರೋಪಿ, ಚಿತ್ರೀಕರಣಕ್ಕೆ ಅಗತ್ಯವಿದ್ದ ಹಲವು ವಸ್ತುಗಳನ್ನು ಕದ್ದಿದ್ದನೆಂಬುದು ತನಿಖೆಯಿಂದ ಗೊತ್ತಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!