ಉಡುಪಿ: ಬಸ್ಸಿಗೆ ಗೂಡ್ಸ್ ಟೆಂಪೋ ಡಿಕ್ಕಿ- ಇಬ್ಬರು ಗಂಭೀರ

ಉಡುಪಿ ನ. 11 : ಬಸ್ ಚಾಲಕ ಹಠಾತ್ತನೆ ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಿಂದ ಬರುತ್ತಿದ್ದ ಗೂಡ್ಸ್ ಟೆಂಪೋ, ಬಸ್ ಗೆ ಡಿಕ್ಕಿ ಹೊಡೆದು ಇಬ್ಬರು ಗಂಭೀರ ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ಉಡುಪಿಯ ಶಿರಿಬಿಡುವಿನ ಸರಸ್ವತಿ ಶಾಲೆ ಹತ್ತಿರ ನಡೆದಿದೆ.

ಕರಾವಳಿ ಬೈಪಾಸ್ ಬಳಿಯಿಂದ ಅತೀವೆಗದಿಂದ ಉಡುಪಿಯತ್ತ ಹೋಗುತ್ತಿದ್ದ ಬಸ್‌ನ ಚಾಲಕ ಶಿರಿಬಿಡು ಬಳಿ ಹಠತ್ತನೆ ಬ್ರೇಕ್ ಹಾಕಿದ್ದಾನೆ. ಇದರಿಂದ  ಹಿಂಬದಿಯಿಂದ ಬರುತ್ತಿದ್ದ ಗೂಡ್ಸ್ ಟೆಂಪೋ ಚಾಲಕ ನಿಯಂತ್ರಣ ತಪ್ಪಿ ಎದುರಿನಲ್ಲಿದ್ದ ಬಸ್ಸಿಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಟೆಂಪೋ ಚಾಲಕ ಹಾಗೂ ಮತ್ತೋರ್ವ ಗಂಭೀರ ಗಾಯಗೊಂಡಿದ್ದಾರೆ.

ಅಪಘಾತದ ರಭಸಕ್ಕೆ ಟೆಂಪೋ ಮುಂಭಾಗ ನಜ್ಜುಗುಜ್ಜಾಗಿದ್ದು,  ಟೆಂಪೋದಲ್ಲಿ ಸಿಲುಕಿಕೊಂಡಿದ್ದ ಚಾಲಕ ಹಾಗೂ ಮತ್ತೊರ್ವನನ್ನು ಸ್ಥಳೀಯರು ಹರಸಾಹಸ ಪಟ್ಟು ಹೊರಗೆ ತೆಗೆದು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಗೂಡ್ಸ್ ಟೆಂಪೋದಲ್ಲಿದ್ದ ಇಬ್ಬರ ಪೈಕಿ ಚಾಲಕ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Leave a Reply

Your email address will not be published.

error: Content is protected !!