ನ.13 ಉಡುಪಿ ಜಿಲ್ಲಾ ಫ್ಲವರ್’ ಡೆಕೋರೇಟರ್ಸ್ ಮಾಲಕರ ಸಂಘ ಉದ್ಘಾಟನೆ

ಉಡುಪಿ ನ.12 (ಉಡುಪಿ ಟೈಮ್ಸ್ ವರದಿ): ಜಿಲ್ಲಾ ಫ್ಲವರ್ ಡೆಕೋರೇಟರ್ಸ್ ಮಾಲಕರ ಸಂಘದ ಉದ್ಘಾಟನಾ ಸಮಾರಂಭ ನ. 13ರಂದು ಅಂಬಲಪಾಡಿಯ ಶಾಮಿಲಿ ಸಭಾಭವನದಲ್ಲಿ ಸಂಜೆ 4:00 ಗೆ ನಡೆಯಲಿದೆ ಎಂದು ಸಂಘಟನೆಯ ಅಧ್ಯಕ್ಷ ಅಕ್ಷಯ್ ಜೈನ್ ಅವರು ತಿಳಿಸಿದ್ದಾರೆ.

ಈ ಬಗ್ಗೆ ಇಂದು ಉಡುಪಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ನ.13 ರಂದು ಸಂಘಟನೆಯನ್ನು ಉಡುಪಿ ಶಾಸಕ ರಘುಪತಿ ಭಟ್ ಅವರು ಉದ್ಘಾಟಿಸಲಿದ್ದಾರೆ. ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ ಉಡುಪಿ ಇದರ ಸ್ಥಾಪಕರಾದ ಡಾ. ಜಿ ಶಂಕರ್ ಅವರು ಸಂಘದ ಲಾಂಛನವನ್ನು ಅನಾವರಣಗೊಳಿಸಲಿದ್ದಾರೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಡಳಿತ ನಿರ್ದೇಶಕ ಡಾ. ಮೋಹನ್ ಆಳ್ವ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ ಎಂದು ತಿಳಿಸಿದರು.

ಹಾಗೂ ಈ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್, ಮಂಗಳೂರು-ಉಡುಪಿ ಜಿಲ್ಲಾ ಮೀನುಗಾರರ ಫೆಡರೇಶನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ, ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ, ನಗರ ಸಭಾ ಅಧ್ಯಕ್ಷೆ ಸುಮಿತ್ರ ಆರ್. ನಾಯಕ್, ಉಜ್ವಲ್ ಡೆವಲಪರ್ಸ್ ಇದರ ಪುರುಷೋತ್ತಮ ಶೆಟ್ಟಿ, ಸಾಯಿರಾಧ ಡೆವಲಪರ್ಸ್ ಇದರ ಮನೋಹರ್ ಶೆಟ್ಟಿ, ಮಾಂಡವಿ ಡೆವಲಪರ್ಸ್ ಇದರ ಜೆರ್ರಿ ವಿನ್ಸೆಂಟ್ ಡಯಾಸ್, ಬಡಗು ಬಿಟ್ಟು ಕ್ರೆಡಿಟ್ ಕಾ-ಅಪರೇಟಿವ್ ಸೊಸೈಟಿಯ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ, ಸಾಫಲ್ಯ ಟ್ರಸ್ಟ್ ಉಡುಪಿ ಇದರ ವಿರುಪಮಾ ಪ್ರಸಾದ್ ಶೆಟ್ಟಿ, ಉಡುಪಿ ಜಿಲ್ಲಾ ಸೌಂಡ್ಸ್ ಆಂಡ್ ಲೈಟ್ಸ್ ಮಾಲಕರ ಸಂಘದ ಅಧ್ಯಕ್ಷ ರಾಮಕೃಷ್ಣ ಕುಂದರ್, ಉಡುಪಿ ಜಿಲ್ಲಾ ಶಾಮಿಯಾನ ಮಾಲಕರ ಸಂಘದ ಅಧ್ಯಕ್ಷ ಉದಯ್ ಕುಮಾರ್, ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಅಧ್ಯಕ್ಷ ಜನಾರ್ಧನ ಕೊಡುವೂರು, ದಕ್ಷಿಣ ಕನ್ನಡ ಜಿಲ್ಲಾ ಫ್ಲವರ್ ಡೆಕೋರೇಟರ್ಸ್ ಮಾಲಕರ ಸಂಘದ ಅಧ್ಯಕ್ಷ ಅಶ್ವಿನ್ ಕೊಟ್ಟಾರಿ, ಪ್ರಧಾನ ಕಾರ್ಯದರ್ಶಿ ಸುಲಕ್ಷಣ ಬಿ. ರೈ, ಕೋಶಾಧಿಕಾರಿ ವಿಲ್ಫ್ರೆಡ್ ಪಿಂಟೋ, ಉದ್ಯಾವರದ ಹಲೀಮಾ ಸಬ್ಜು ಆಡಿಟೋರಿಯಂನ ಮಾಲೀಕ ಜಲೀಲ್ ಸಾಹೇಬ್ ಅವರು ಉಪಸ್ಥಿತರಿರಲಿದ್ದಾರೆ ಎಂದು ಮಾಹಿತಿ ನೀಡಿದರು.

ಇನ್ನು ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಈ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ಹಿರಿಯರನ್ನು ಸನ್ಮಾನಿಸಿ ಗೌರವಿಸಲಾಗುವುದು ಹಾಗೂ ಬಳಿಕ ಚೇತನ್ ಬ್ಯಾಂಡ್ ಬಳಗ ಮಂಗಳೂರು ಇವರಿಂದ ಸಂಗೀತ ಮತ್ತು ಮನೋರಂಜನಾ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು

ಈ ಸಂದರ್ಭ ಪತ್ರಿಕಾಗೋಷ್ಠಿಯಲ್ಲಿ ಉಡುಪಿ ಜಿಲ್ಲಾ ಫ್ಲವರ್ ಡೆಕೋರೇಟರ್ಸ್ ಮಾಲಕರ ಸಂಘದ ಉಪಾಧ್ಯಕ್ಷ ದಾಮೋದರ ಜೋಗಿ, ಕೋಶಾಧಿಕಾರಿ ಸುರೇಶ್ ಆಮೀನ್, ಸಂಘಟನಾ ಕಾರ್ಯದರ್ಶಿ ಈಶಾನ್ ಬಲ್ಲಾಳ್, ಕಾರ್ಯದರ್ಶಿ ಆಶಿಫ್, ಜತೆ ಕಾರ್ಯದರ್ಶಿ ಪ್ರದೀಪ್ ಉಪಸ್ಥಿತರಿದ್ದರು.

Leave a Reply

Your email address will not be published.

error: Content is protected !!