ಉಡುಪಿ: ನ.13-ಆದರ್ಶ ಆಸ್ಪತ್ರೆಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ಉಡುಪಿ ನ.12 : ವಿಶ್ವ ಮಧುಮೇಹ ದಿನದ ಅಂಗವಾಗಿ ಆದರ್ಶ ಚಾರಿಟೇಬಲ್ ಟ್ರಸ್ಟ್, ಆದರ್ಶ ಗ್ರೂಪ್ ಆಫ್ ಇನ್ಸಿಟೂಶನ್ಸ್ ಮತ್ತು ಆದರ್ಶ ಆಸ್ಪತ್ರೆ ಉಡುಪಿ ಇದರ ಜಂಟಿ ಆಶ್ರಯದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ನ.13 ರಂದು ಆಯೋಜಿಸಲಾಗಿದೆ.

ಈ ಬಗ್ಗೆ ಆಸ್ಪತ್ರೆಯ ಆಡಳಿತ ಮಂಡಳಿ ಮಾಹಿತಿ ನೀಡಿದ್ದು, ಉಚಿತ ಆರೋಗ್ಯ ತಪಾಸಣಾ ಶಿಬಿರವು ನ.13 ರಂದು ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಆದರ್ಶ ಆಸ್ಪತ್ರೆಯಲ್ಲಿ ನಡೆಯಲಿದೆ. ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಸೂಚಿಸಲಾಗಿದೆ.

Leave a Reply

Your email address will not be published.

error: Content is protected !!