ಶಾಲೆಗಳಿಗೆ ಕೇಸರಿ ಬಣ್ಣ: ಎಲ್ಲದರಲ್ಲೂ ರಾಜಕಾರಣ ಸಲ್ಲದು: ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು, ನ.14: ಕೇಸರಿ ಬಣ್ಣ ಭಾರತದ ಧ್ವಜದಲ್ಲಿಯೇ ಇದೆ. ಹೀಗಿರುವಾಗ ಎಲ್ಲದರಲ್ಲೂ ರಾಜಕಾರಣ ಮಾಡುವುದು ಬಹಳ ಕೆಳ ಮಟ್ಟದ್ದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ಶಾಲೆಗಳಿಗೆ ಕೇಸರಿ ಬಣ್ಣ ಬಳಿಯುತ್ತಿರುವ ಬಗ್ಗೆ ಕಾಂಗ್ರೆಸ್ ನ ವಿರೋಧದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು,  ಕೇಸರಿ ಬಣ್ಣ ಭಾರತದ ಧ್ವಜದಲ್ಲಿಯೇ ಇರುವಾಗ ಕೇಸರಿ ಕಂಡರೆ ಏಕೆ ಸಿಟ್ಟು?, ಸ್ವಾಮಿ ವಿವೇಕಾನಂದರ ಹೆಸರಿನಲ್ಲಿಯೇ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುತ್ತಿದ್ದು ಅವರೊಬ್ಬ ಸನ್ಯಾಸಿ. ಅವರು ತೊಟ್ಟಿದ್ದು ಕೇಸರಿ ಬಣ್ಣದ ಕಾವಿ.  ವಿವೇಕ  ಎಂದರೆ ಎಲ್ಲರಿಗೂ ಜ್ಞಾನ. ಅದನ್ನು ಕಲಿಯಲಿ ಎಂದರು. 

ಅವರು ಇಂದು ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನದ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿರುವ ನೆಹರು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವ ಹಾಲಪ್ಪ ಆಚಾರ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!