ವಿಧಾನಸಭೆ ಚುನಾವಣೆಗೆ ನಾನು ಸೇರಿದಂತೆ 25 ಪ್ರಖರ ಹಿಂದುತ್ವವಾದಿಗಳು ಸ್ಪರ್ಧೆ: ಮುತಾಲಿಕ್

ಚಿಕ್ಕಮಗಳೂರು ನ.14: ಮುಂದಿನ ವರ್ಷ ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ತಾವು ಸೇರಿದಂತೆ 25 ಪ್ರಖರ ಹಿಂದುತ್ವವಾದಿಗಳು ಪಕ್ಷೇತರ ಅಭ್ಯರ್ಥಿಗಳಾಗಿ ಸ್ಪರ್ಧಿಸುವುದಾಗಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ತಮ್ಮ ಚುನಾವಣಾ ಸ್ಪರ್ಧೆ ಬಗ್ಗೆ ಮಾತನಾಡಿದ ಅವರು, “ಕೇಂದ್ರದಲ್ಲಿ ಮೋದಿ (ಪ್ರಧಾನಿ ನರೇಂದ್ರ ಮೋದಿ) ಮತ್ತು ಉತ್ತರ ಪ್ರದೇಶದಲ್ಲಿ ಯೋಗಿ(ಸಿಎಂ ಯೋಗಿ ಆದಿತ್ಯನಾಥ್) ಹೊರತುಪಡಿಸಿ, ಹಿಂದುತ್ವವನ್ನು ರಕ್ಷಿಸಲು ಬೇರೆಯವರು ಕೆಲಸ ಮಾಡುವುದನ್ನು ಅಥವಾ ಆಡಳಿತ ನಡೆಸುವುದನ್ನು ನಾವು ನೋಡಲು ಸಾಧ್ಯವಿಲ್ಲ. ಹಿಂದೂಗಳ ಪರಿಶ್ರಮದಿಂದ ಕರ್ನಾಟಕದಲ್ಲಿ ಗೆದ್ದ ಬಿಜೆಪಿಗೆ ಹಿಂದೂಗಳು ಮತ್ತು ಹಿಂದೂ ಕಾರ್ಯಕರ್ತರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ ಎಂದು ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಹಾಗೂ ಹಿಂದೂ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆಯಡಿ ಪ್ರಕರಣಗಳು ದಾಖಲಾಗುತ್ತಿದ್ದು, ರೌಡಿ ಶೀಟ್‍ನಲ್ಲಿ ಹೆಸರು ಸೇರಿಸಲಾಗುತ್ತಿದೆ. ಬಿಜೆಪಿ ಸರ್ಕಾರ ಇದ್ದರೂ ಹಿಂದೂಗಳ ಬಗ್ಗೆ ಕರುಣೆ ತೋರಿಲ್ಲ. ಅನೇಕ ಹಿಂದೂ ಕಾರ್ಯಕರ್ತರ ಹತ್ಯೆಗಳೂ ನಡೆದಿವೆ. ಹಿಂದೂಗಳ ಬೆಂಬಲದೊಂದಿಗೆ ಅಧಿಕಾರಕ್ಕೆ ಬಂದ ಬಿಜೆಪಿ, ಸಮುದಾಯ ಮತ್ತು ಹಿಂದುತ್ವವನ್ನು ರಕ್ಷಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.

Leave a Reply

Your email address will not be published. Required fields are marked *

error: Content is protected !!