ಕಾಪು ಉತ್ತರ ವಲಯ ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾಗಿ ಚಂದ್ರಶೇಖರ ಗುಡ್ಡೆಅಂಗಡಿ ನೇಮಕ

ಕಾಪು ನ.14 (ಉಡುಪಿ ಟೈಮ್ಸ್ ವರದಿ) : ಕಾಪು ಉತ್ತರ ವಲಯ ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾಗಿ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಸದಸ್ಯ ಚಂದ್ರಶೇಖರ ಗುಡ್ಡೆಅಂಗಡಿ ಅವರನ್ನು ನೇಮಿಸಲಾಗಿದೆ.

ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರ ಸೂಚನೆಯಂತೆ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಹಾಗೂ ಹಾಲಿ ಸದಸ್ಯರಾದ ಚಂದ್ರಶೇಖರ ಗುಡ್ಡೆಅಂಗಡಿ ಅವರನ್ನು ಕಾಪು ಉತ್ತರ ವಲಯ ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾಗಿ ನೇಮಕ ಮಾಡಿ ಕಾಪು ಉತ್ತರ ವಲಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಕುಲಾಲ್ ಪಕ್ಕಲ್ ಅವರು ಸೂಚನೆ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!