ಮಂಗಳೂರು: ಖಾಸಗಿ ಬಸ್ ಗಳ ನಡುವೆ ಅಪಘಾತ ಪ್ರಯಾಣಿಕರು ಪಾರು

ಮಂಗಳೂರು ನ.14 : ನಗರದ ಅಂಬೇಡ್ಕ ಸರ್ಕಲ್ ಬಳಿ ಇಂದು ಬೆಳಗ್ಗೆ ಎರಡು ಖಾಸಗಿ ಬಸ್ ಗಳ ನಡುವೆ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಎರಡು ಬಸ್ಸುಗಳಿಗೆ ಹಾನಿ ಉಂಟಾಗಿದ್ದು, ಚಾಲಕ ಸೇರಿದಂತೆ ಬಸ್ ನಲ್ಲಿದ್ದ ಎಲ್ಲಾ ಪ್ರಯಾಣಿಕರು ಸಣ್ಣ-ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಅಪಘಾತದಿಂದಾಗಿ ಕೆಲಕಾಲ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಬಳಿಕ ಸ್ಥಳಕ್ಕೆ ಆಗಮಿಸಿದ ಟ್ರಾಫಿಕ್ ಠಾಣೆ ಪೊಲೀಸರು ಬಸ್ಸುಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Leave a Reply

Your email address will not be published. Required fields are marked *

error: Content is protected !!