ಕಲಬುರಗಿ: ಮಾರಾಕಾಸ್ತ್ರದಿಂದ ದಾಳಿ ನಡೆಸಿ ವಿದ್ಯಾರ್ಥಿಯ ಕೊಲೆ

ಕಲಬುರಗಿ ನ.16 : ಛೋಟಾ ರೋಜಾ ಬಡಾವಣೆಯ ಬೌವುಲಿಗಲ್ಲಿಯ ಸಮೀಪ ವಿದ್ಯಾರ್ಥಿಯೋರ್ವನಿಗೆ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ನಡೆದಿದೆ.

ಶರಣಬಸಪ್ಪ ಅಪ್ಪಾ ಮಹಾವಿದ್ಯಾಲಯದಲ್ಲಿ ಓದುತ್ತಿದ್ದ ಮೊಹಮ್ಮದ್ ಮುದ್ದಸೀರ್ (19) ಕೊಲೆಯಾದ ವಿದ್ಯಾರ್ಥಿ.

ನಿನ್ನೆ ಸಂಜೆ ವೇಳೆ ಛೋಟಾ ರೋಜಾ ಬಡಾವಣೆಯ ಬೌವುಲಿಗಲ್ಲಿಯ ಅಮಿರ್ ಗುಲಶನ್ ಫಂಕ್ಷನ್ ಹಾಲ್ ಹತ್ತಿರ ಆರೋಪಿಗಳು ವಿದ್ಯಾರ್ಥಿ ಮೇಲೆ ಮಾರಾಕಾಸ್ತ್ರದಿಂದ ದಾಳಿ ನಡೆಸಿ ಪರಾರಿಯಾಗಿದ್ದರು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಮುದ್ದಸೀರ್ ನನ್ನು ನಗರದ ಮಣೂರ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಸತತ ಚಿಕಿತ್ಸೆಯ ಬಳಿಕವೂ ತಡ ರಾತ್ರಿ ಆತ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!