ರಾಜ್ಯದಲ್ಲಿ ರೂಪಾತಂರಿ ಕೊರೋನಾ ಪತ್ತೆ,ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುವುದು: ಆರೋಗ್ಯ ಸಚಿವ

ಬೆಂಗಳೂರು: ಭಾರತದಲ್ಲಿ 7 ಮಂದಿಯಲ್ಲಿ ರೂಪಾಂತರಿ ಕೊರೋನಾ ವೈರಸ್ ಪತ್ತೆಯಾಗಿರುವ ಆತಂಕಕಾರಿ ಸುದ್ದಿಯೊಂದು ವರದಿಯಾಗಿದೆ. ಈ ನಡುವೆ ಈ ಮಹಾಮಾರಿ ವೈರಸ್ ರಾಜ್ಯಕ್ಕೂ ವಕ್ಕರಿಸಿದ್ದು ರಾಜ್ಯದಲ್ಲಿ ಒಟ್ಟು 3  ಮಂದಿಯಲ್ಲಿ ಈ ಸೋಂಕು ಇರುವುದು ದೃಢಪಟ್ಟಿದೆ.       

ಈ  ನಡುವೆ ಹೊಸ ಕೊರೊನಾ ಹಬ್ಬದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ   ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಕೊರೊನಾ ವೈರಾಣುವಿನ ರೂಪಾಂತರಗೊಂಡ ಪ್ರಬೇಧವನ್ನು ಪತ್ತೆ ಮಾಡಲು ಯು ಕೆ ನಿಂದ ರಾಜ್ಯಕ್ಕೆ ಮರಳಿದ್ದ ವ್ಯಕ್ತಿಗಳನ್ನು ನಿಮ್ಹಾನ್ಸ್ ನಲ್ಲಿ ಪರೀಕ್ಷೆಗೊಳಪಡಿಸಲಾಗಿತ್ತು. ಈ ಪೈಕಿ ಮೂವರಲ್ಲಿ ಹೊಸ ಪ್ರಬೇಧದ ಸೋಂಕು ದೃಢಪಟ್ಟಿದ್ದು.

ಹೊಸ ಪ್ರಬೇಧದ ವೈರಸ್ ಹರಡದಂತೆ ತಡೆಯಲು ತಜ್ಞರೊಂದಿಗೆ ಚರ್ಚಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಬರೆದುಕೊಂಡಿದ್ದಾರೆ.
ರಾಜ್ಯದಲ್ಲೂ ಬ್ರಿಟನ್ ವೈರಸ್ ಪತ್ತೆ ಹಿನ್ನೆಲೆಯಲ್ಲಿ ಆರೋಗ್ಯ ಸಚಿವರು ಇಂದು ವಿಧಾನಸೌಧದಲ್ಲಿ ತಜ್ಞರ ಜೊತೆ ಸಭೆ ನಡೆಸಲಿದ್ದಾರೆ. ಹೊಸ ವರ್ಷಾಚರಣೆಗೆ ಬಿಗಿ ಮಾರ್ಗಸೂಚಿಗಳ ಬಗ್ಗೆ ಹಾಗೂ ಉಳಿದ ಬ್ರಿಟನ್ ವಾಪಸಿಗರ ಆರೋಗ್ಯ ಮೇಲೆ ನಿಗಾ ವಹಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

error: Content is protected !!