ಶಾಲಾ ಕ್ರೀಡಾಕೂಟದಲ್ಲಿ ಅಲ್ಲಾಹು ಅಕ್ಬರ್ ಘೋಷಣೆ- ಹಿಂ. ಜಾಗರಣ ವೇದಿಕೆ ಪ್ರತಿಭಟನೆ

ಕುಂದಾಪುರ ನ.16 : ಶಂಕರನಾರಾಯಣ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆದ ಕ್ರೀಡಾ ಕೂಟದಲ್ಲಿ ಹಿಂದೂ ಹುಡುಗಿಯರಿಂದ ನಮಾಜ್ ಹಾಗೂ ಬಾಂಗ್ ಮಾಡಿಸಿದ್ದರ ವಿರುದ್ಧ ಹಿಂದೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿನ್ನೆ ಮದರ್ ತೆರೆಸಾ ಶಾಲೆಯ ವತಿಯಿಂದ ನಡೆದ ಕುಂದಾಪುರ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಹಿಂದೂ ಹುಡುಗಿಯರಿಂದ ನಮಾಜ್ ಮತ್ತು ಬಾಂಗ್ ( ಅಲ್ಲಾಹ್ ಅಕ್ಬಾರ್ ಅಜಾನ್) ಮಾಡಿಸಿದ್ದಾರೆ ಎನ್ನಲಾಗಿದೆ.

ಇದೀಗ ಈ ಕಾರ್ಯಕ್ರಮದ ವಿಡಿಯೋಗಳು ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದ್ದು, ಶಾಲೆಯಲ್ಲಿ ಈ ರೀತಿ ಮಾಡಿಸಿದ್ದು ತಪ್ಪು ಎಂದು ಹಿಂದೂ ಹುಡುಗಿಯರಿಂದ ನಮಾಜ್ ಹಾಗೂ ಬಾಂಗ್ ಮಾಡಿಸಿದ್ದರ ಬಗ್ಗೆ ಹಿಂದೂ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಹಾಗೂ ಶಾಲೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಶಾಲಾ ಆಡಳಿತ ಮಂಡಳಿ ಹಾಗೂ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿತ್ತು. ಈ ವೇಳೆ ವಿದ್ಯಾರ್ಥಿಗಳ ನೃತ್ಯದ ನಡುವೆ ಅಝಾನ್ ಬಳಸಿದ್ದು ತಪ್ಪು, ಆದರೆ ಇದನ್ನು ನೃತ್ಯದ ಒಂದು ಭಾಗವಾಗಿ ಬಳಸಿದ್ದೇವೆಯೇ ಹೊರತು ಯಾರದೇ ಭಾವನೆಗೆ ಧಕ್ಕೆ ಮಾಡುವ ಸಲುವಾಗಿ ಬಳಸಿಲ್ಲ. ಅಝಾನ್ ಹಾಡು ಬಳಸಿದಕ್ಕಾಗಿ ಕ್ಷಮೆ ಕೇಳುತ್ತೇವೆ ಎಂದು ಶಾಲಾ ಆಡಳಿತ ಮಂಡಳಿ ಕ್ಷಮೆ ಕೇಳಿದೆ. ಆದರೆ ಹಿಂದೂ ಸಂಘಟನೆಗಳು ನಗರದಲ್ಲಿ ಪ್ರತಿಭಟನೆ ಮಾಡುತ್ತಿದ್ದು, ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಶಾಲೆಯ ಹಿಂದೂ ವಿರೋಧಿ ನೀತಿಯನ್ನು ವಿರೋಧಿಸಿ, ಕ್ರಮಕ್ಕಾಗಿ ಆಗ್ರಹಿಸಿದ್ದಾರೆ.

ಹಾಗೂ ಈ ಶಿಕ್ಷಣ ಸಂಸ್ಥೆ ಮತ್ತು ಪ್ರಾಂಶುಪಾಲರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಹಿಂದೂ ಕಾರ್ಯಕರ್ತರು ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಕುಂದಾಪುರ ಸರ್ಕಲ್ ಇನ್ಸ್ ಪೆಕ್ಟರ್ ಗೋಪಿಕೃಷ್ಣ ಅವರಿಗೆ ಮನವಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!