ಸಿದ್ದಾಪುರ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಇಬ್ಬರ ಬಂಧನ

ಕುಂದಾಪುರ ನ.16 : ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗ ಮೂಲದವರೆನ್ನಲಾದ ಪ್ರವೀಣ, ಅಜಯ್ ಬಂಧಿತ ಆರೋಪಿಗಳು.

ನ.11ರಂದು ಸಂಜೆ 4:30ರ ವೇಳೆಗೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬಾಲಕಿ ಮನೆಯಲ್ಲಿರುವಾಗ ಆರೋಪಿಗಳು ಅವಳನ್ನು ಪುಸಲಾಯಿಸಿ ಹಾಡಿಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
ಹಾಗೂ ಬಾಲಕಿ ಪ್ರಜ್ಞೆ ತಪ್ಪಿದ್ದನ್ನು ಕಂಡು ಆರೋಪಿಗಳು ಪರಾರಿಯಾಗಿದ್ದು, ಬಳಿಕ ಬಾಲಕಿಯನ್ನು ಹುಡುಕಾಡಿದ ಊರಿನವರು ಆಕೆಯನ್ನು ಶಂಕರನಾರಾಯಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಶಂಕರನಾರಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!