ಕುಂದಾಪುರ: ಅನಾರೋಗ್ಯದಿಂದ ನೊಂದು ವ್ಯಕ್ತಿ ಆತ್ಮಹತ್ಯೆ

ಕುಂದಾಪುರ ನ.16( ಉಡುಪಿ ಟೈಮ್ಸ್ ವರದಿ) : ತಮಗಿದ್ದ ಅನಾರೋಗ್ಯದಿಂದ ಮನನೊಂದು ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರದ ವಡೇರಹೋಬಳಿ ಗ್ರಾಮದಲ್ಲಿ ನಡೆದಿದೆ.

ಅಜಿತ್  (35 ) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಇವರು ಕುಂದಾಪುರದ ಶ್ರೀ ರಾಮ ಟ್ರಾನ್ಸ್‌ ಪೋರ್ಟ್ ಏಜೆನ್ಸಿಯಲ್ಲಿ ಕೆಲಸ ಮಾಡಿಕೊಂಡಿದ್ದು ಸುಮಾರು  2  ವರ್ಷಗಳಿಂದ ಕುಂದಾಪುರ ತಾಲೂಕಿನ  ವಡೇರಹೋಬಳಿ ಗ್ರಾಮದ ಟಿಟಿ ರೋಡ್‌  ನ ಆಶ್ರಯ ಕಾಲೋನಿಯಲ್ಲಿ ಸುರೇಶ್ ಮೊಗವೀರ ಎಂಬವರ  ಬಾಡಿಗೆ ಮನೆಯಲ್ಲಿ  ವಾಸಿಸುತ್ತಿದ್ದರು. ಅವರಿಗೆ  ಸಕ್ಕರೆ ಖಾಯಿಲೆ ಮತ್ತು ಅಧಿಕ ರಕ್ತದೊತ್ತಡ ಖಾಯಿಲೆ ಇದ್ದ ಕಾರಣ ಮಾನಸಿಕವಾಗಿ ನೊಂದು ಜೀವನದಲ್ಲಿ ಜಿಗುಪ್ಸೆ ಗೊಂಡು ನ.15 ರ ರಾತ್ರಿಯಿಂದ ನ.16 ರ ಬೆಳಿಗ್ಗೆನ ಮಧ್ಯಾವಧಿಯಲ್ಲಿ ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಮೃತರ ಅಣ್ಣ ಅನಿಲ್ ಕುಮಾರ್ ಅವರು ನೀಡಿದ ಮಾಹಿತಿಯಂತೆ ಕುಂದಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published.

error: Content is protected !!