ನ.18 ರಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉಡುಪಿಗೆ

ಉಡುಪಿ ನ.17 : ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ನಾಳೆ(ನ.18) ಉಡುಪಿ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ನಾಳೆ ಉಡುಪಿಗೆ ಆಗಮಿಸಲಿರುವ ಅವರು ಮಣಿಪಾಲದ ಮಾಹೆ ವಿ.ವಿಯ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲ್ಲಿದ್ದಾರೆ. ಬಳಿಕ ಎಂಐಟಿ ಕಾಲೇಜಿನ ಸಿವಿಲ್ ಆರ್ಕಿಟೆಕ್ಚರ್ ಕಟ್ಟಡ ಉದ್ಘಾಟಿಸಲಿದ್ದಾರೆ. ರಾಜನಾಥ್ ಸಿಂಗ್ ಭೇಟಿ ಹಿನ್ನೆಲೆ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Leave a Reply

Your email address will not be published. Required fields are marked *

error: Content is protected !!