ಮುಂಬೈ-ಪುಣೆ ಎಕ್ಸ್ ಪ್ರೆಸ್ ವೇಯಲ್ಲಿ ಭೀಕರ ಅಪಘಾತ: ಐವರು ಮೃತ್ಯು

ಮುಂಬೈ ನ.18 : ಮಹಾರಾಷ್ಟ್ರದ ಮುಂಬೈ-ಪುಣೆ ಎಕ್ಸ್ ಪ್ರೆಸ್ ವೇಯಲ್ಲಿ ಇಂದು ಬೆಳಗ್ಗೆ ಕಾರು ಹಾಗೂ ಮತ್ತೊಂದು ವಾಹನದ ನಡುವೆ ನಡೆದ ಭೀಕರ ಅಪಘಾತದಲ್ಲಿ 5 ಮಂದಿ ಮೃತಪಟ್ಟಿದ್ದಾರೆ.

ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಾಪೋಲಿ ಪ್ರದೇಶದ ಬಳಿ ಇಂದು ಮುಂಜಾನೆ ವೇಗವಾಗಿ ಬಂದ ಕಾರೊಂದು ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಅಪಘಾತದ ರಭಸಕ್ಕೆ ಕಾರಿನ ಮುಂಬಾಗ ಜಖಂ ಗೊಂಡಿದೆ. ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Leave a Reply

Your email address will not be published. Required fields are marked *

error: Content is protected !!