ಕುಂದಾಪುರ: ಕಾರಿಗೆ ಟ್ಯಾಂಕರ್ ಡಿಕ್ಕಿ- ಪ್ರಯಾಣಿಕರು ಪಾರು

ಕುಂದಾಪುರ, ನ.18: ಕುಂಭಾಸಿ ಸಮೀಪದ ಕೊರವಡಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಘಟನೆ ಇಂದು ಬೆಳಗ್ಗೆ ನಡೆದಿದೆ.
ಕುಂದಾಪುರ ಕಡೆಯಿಂದ ಉಡುಪಿಯತ್ತ ಸಾಗುತ್ತಿದ್ದ ಕಾರಿಗೆ ಹಿಂಭಾಗದಿಂದ ಬಂದ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ಚಾಲಕ ಸಹಿತ ಇಬ್ಬರು ಮಹಿಳಾ ಪ್ರಯಾಣಿಕರು ಇದ್ದರು. ಸದ್ಯ ಘಟನೆಯಲ್ಲಿ ಯಾವುದೇ ಅಪಾಯಗಳಿಲ್ಲದೆ ಕಾರಿನಲ್ಲಿದ್ದ ಮೂರು ಮಂದಿ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತದ ರಭಸಕ್ಕೆ ಕಾರು ಜಖಂಗೊಂಡಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.