13ನೇ ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ ನ.18 (ಉಡುಪಿ ಟೈಮ್ಸ್ ವರದಿ) : ನಗರದ ಅಂಬಲಪಾಡಿಯ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನದ ಭವಾನಿ ಮಂಟಪದ ಡಾ.ಮುರಾರಿ ಬಲ್ಲಾಳ್ ವೇದಿಕೆಯಲ್ಲಿ ನ.25 ಮತ್ತು ನ.26 ರಂದು ಉಡುಪಿ ನಡೆಯಲಿರುವ 13 ನೇ ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಇಂದು ನಡೆಯಿತು.

ಉಡುಪಿ ಜಿಲ್ಲಾಧಿಕಾರಿ ಕೂರ್ಮ ಎಂ ರಾವ್ ಅವರು 13 ನೇ ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ಹಿರಿಯ ಸಾಹಿತಿ ಟಿ. ತಿರುಮಲೇಶ್ವರ ಭಟ್ ಅಧ್ಯಕ್ಷತೆಯಲ್ಲಿ ನಡೆಯುವ ಸಮ್ಮೇಳನವನ್ನು ಸಾಹಿತಿ ವೀಣಾ ಬನ್ನಂಜೆ ಅವರು ಉದ್ಘಾಟಿಸಲಿದ್ದಾರೆ.

ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಪರೀಕ್ಷಾರ್ಥಿ ಭಾರತೀಯ ಆಡಳಿತ ಸೇವಾಧಿಕಾರಿ ಯತೀಶ್ ಆರ್, ಉಡುಪಿ ಜಿಲ್ಲಾ ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಹೆಚ್. ಪಿ, ಕಾರ್ಯದರ್ಶಿ ಜನಾರ್ದನ್ ಕೊಡವೂರು ಉಪಸ್ಥಿತರಿದ್ದರು.

Leave a Reply

Your email address will not be published.

error: Content is protected !!