ಕಾರ್ಕಳ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಕಾರ್ಕಳ ನ.25 (ಉಡುಪಿ ಟೈಮ್ಸ್ ವರದಿ) : ತಾಲೂಕಿನ ಕಸಬಾ ಗಾಮದ ರಾಮಸಮುದ್ರ ಎಂಬಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಕೇವಿನ್ ಡಿ ಮೆಲ್ಲೋ(57) ಆತ್ಮಹತ್ಯೆ ಮಾಡಿಕೊಂಡವರು.

ಇವರು ಕಸಬಾ ಗಾಮದ ರಾಮಸಮುದ್ರ ಬಳಿ ಸುಮಾರು 9 ವರ್ಷದ ಹಿಂದೆ ಕಟ್ಟಿದ ಮನೆಗೆ ಹೋಗಿಬರುತ್ತಿದ್ದರು. ನ.24 ರಂದು ಬೆಳಗ್ಗೆಯಿಂದ ಮಧ್ಯಾಹ್ನದ ಮದ್ಯಾವಧಿಯಲ್ಲಿ ಇವರು ರಾಮಸಮುದ್ರ ಬಳಿ ಇರುವ ತನ್ನ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಕೇವಿನ್ ಡಿ ಮೆಲ್ಲೋ ಅವರ ಪತ್ನಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!