ಕಾಂತಾರ-“ವರಾಹ ರೂಪಂ” ಹಾಡಿಗೆ ವಿಧಿಸಿದ್ದ ತಡೆಯಾಜ್ಞೆ ತೆರವು

ಬೆಂಗಳೂರು ನ.25 : ದೇಶದಾದ್ಯಂತ ಭರ್ಜರಿ ಯಶಸ್ಸು ಕಾಣುತ್ತಿರುವ ಕಾಂತಾರ ಚಿತ್ರದ ವರಾಹ ರೂಪಂ ಹಾಡಿಗೆ ನೀಡಿದ್ದ ತಡೆಯಾಜ್ಞೆಯನ್ನು ಕೇರಳ ಸ್ಥಳೀಯ ಕೋರ್ಟ್‌ ತೆರುವು ಮಾಡಿದೆ.

ವರಾಹ ರೂಪಂ ಹಾಡನ್ನು ಬಳಸದಂತೆ ತಾತ್ಕಾಲಿಕ ತಡೆಯಾಜ್ಞೆ ನೀಡಿದ್ದ ಕೋಯಿಕ್ಕೋಡ್ ನ್ಯಾಯಾಲಯ, ವಿವಾದದ ಬಗ್ಗೆ ಅಂತಿಮ ಆದೇಶ ಹೊರಡಿಸಿದ್ದು ತೈಕ್ಕುಡಂ ಬ್ರಿಡ್ಜ್ ಅರ್ಜಿಯನ್ನೇ ವಜಾ ಮಾಡಿದೆ ಎಂದು ತಿಳಿದು ಬಂದಿದೆ.

ಈ ಮೂಲಕ ಚಿತ್ರದಲ್ಲಿ ವರಾಹ ರೂಪಂ ಹಾಡು  ಬಳಕೆಗೆ ಅನುಮತಿ ಸಿಕ್ಕಿದ್ದು, ಕಾಂತಾರ ಸಿನಿಮಾ ತಂಡದ ಕಾನೂನು ಹೋರಾಟಕ್ಕೆ ಕೊನೆಗೂ ಭರ್ಜರಿ ಗೆಲುವು ಸಿಕ್ಕಂತಾಗಿದೆ

Leave a Reply

Your email address will not be published.

error: Content is protected !!