ರಾಜ್ಯದಲ್ಲಿ ನ.28ರ ವರೆಗೆ ವ್ಯಾಪಕ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು ನ.26 : ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಭಾರೀ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಹಾಗೂ ತಮಿಳುನಾಡು ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವುದರಿಂದ ನವೆಂಬರ್ 28ರವರೆಗೆ ಕರ್ನಾಟಕದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಮಾತ್ರವಲ್ಲದೆ ಕರ್ನಾಟಕದ ಕರಾವಳಿಯ ಜಿಲ್ಲೆಗಳು ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಇಂದಿನಿಂದ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.

ಕರಾವಳಿ ಭಾಗದ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಹಾಗೂ ಮಲೆನಾಡಿನ ಭಾಗಗಳಾದ ಶಿವಮೊಗ್ಗ, ಕೊಡಗು ಮತ್ತು ಹಾಸನದ ಗುಡ್ಡಗಾಡು ಪ್ರದೇಶಗಳಲ್ಲೂ ಜೋರು ಮಳೆಯಾಗಲಿದೆ. ಅದೇ ರೀತಿ ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ದಾವಣಗೆರೆ, ಮೈಸೂರು, ತುಮಕೂರು ಹಾಗೂ ಉತ್ತರ ಕರ್ನಾಟಕದ ವಿಜಯಪುರ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಇಂದು ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನವೆಂಬರ್ 28ರವರೆಗೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಒಂದೆರಡು ಕಡೆಗೆ ತುಂತುರು ಇಲ್ಲವೇ ಹಗುರ ಮಳೆ ಸುರಿಯುವ ಸಾಧ್ಯತೆ ಇದೆ. ಇದೇ ಅವಧಿಯಲ್ಲಿ ಉತ್ತರ ಒಳನಾಡಿನ ಹಲವು ಪ್ರದೇಶಗಳಲ್ಲಿ ತುಂತುರು ಮಳೆ ಬೀಳಬಹುದು ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!